ಹೊಳಲಿ ಹೊಸೂರು ಹಾಲು ಉತ್ಪಾದಕರ ಸಂಘದ ಪದಾಧಿಕಾರಿಗಳ ಆಯ್ಕೆ
ಹೊಳಲಿ ಹೊಸೂರು ಹಾಲು ಉತ್ಪಾದಕರ ಸಂಘದ ಪದಾಧಿಕಾರಿಗಳ ಆಯ್ಕೆ
ಕೋಲಾರ ತಾಲ್ಲೂಕು ಹೊಳಲಿ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ್ಗೌಡ, ಉಪಾಧ್ಯಕ್ಷರಾಗಿ ಆವಲಪ್ಪ ಆಯ್ಕೆಯಾಗಿದ್ದಾರೆ.


ಕೋಲಾರ ೨೯ ಏಪ್ರಿಲ್ (ಹಿ.ಸ) :

ಆ್ಯಂಕರ್ : ತಾಲೂಕಿನ ಹೊಳಲಿ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಲ್ ಮಂಜುನಾಥಗೌಡ ಮತ್ತು ಉಪಾಧ್ಯಕ್ಷರಾಗಿ ಆವಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ನಿಗಧಿಯಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಲ್ ಮಂಜುನಾಥಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಲಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಹಬೀದ್ ಹುಸೇನ್ ಘೋಷಿಸಿದ್ದಾರೆ. ಈ ವೇಳೆ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರುಗಳಾದ ಅಂಬರೀಶ್, ಶ್ರೀನಿವಾಸ್ ಎಲ್ಲಾ ನಿರ್ದೇಶಕರುಗಳು ಹಾಗೂ ಊರಿನ ಮುಖಂಡರುಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande