
ಯಲಬುರ್ಗಾ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಯಲಬುರ್ಗಾ ತಾಲ್ಲೂಕಿನ ಮುಧೋಳ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27 ನೇ ಸಾಲಿನ ವಿವಿಧ ವೃತ್ತಿಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ವಿದ್ಯುತ್ಶಿಲ್ಪಿ, ಜೋಡಣೆಗಾರ ವೃತ್ತಿಗಳಲ್ಲಿ ಸೀಟುಗಳು ಲಭ್ಯವಿರುತ್ತವೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮೇ 8 ರೊಳಗೆ ಸಂಸ್ಥೆಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದರ ಮೂಲಕ ತಮ್ಮ ಎಲ್ಲಾ ಮೂಲ ದಾಖಲಾತಿ ಪತ್ರಗಳನ್ನು ಪರಿಶೀಲಿಸಿಕೊಂಡು ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಾಂತೇಶ: 8970017916, ಶಿವರಾಜಕುಮಾರ: 9886588558, ಮಂಜುನಾಥ ಗಾಣಿಗೇರ:9164198246, ತಿಪ್ಪಣ್ಣ: 9945481062 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್