ಕಾಶಿ ವಿಶ್ವನಾಥನ ದರ್ಶನ ಪಡೆದ ಪ್ರಧಾನಿ ಮೋದಿ
ವಾರಣಾಸಿ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಶಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಕುರಿತು ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಕಾಶಿಯ ಬಾಬಾ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಮತ್ತು ಪೂಜೆ
PM


ವಾರಣಾಸಿ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಶಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಕುರಿತು ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಕಾಶಿಯ ಬಾಬಾ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಮತ್ತು ಪೂಜೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿತು. ಇಲ್ಲಿ ನಾನು ದೇಶದ ಎಲ್ಲಾ ಜನರಿಗೆ ಸಂತೋಷ, ಸಮೃದ್ಧಿ ಮತ್ತು ಆರೋಗ್ಯಕರ ಜೀವನಕ್ಕಾಗಿ ಶಿವನಲ್ಲಿ ಪ್ರಾರ್ಥಿಸಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ, ಅನ್ನಪೂರ್ಣ ದೇವಿ ಮತ್ತು ಗಂಗಾ ನದಿ ದರ್ಶನ ಪಡೆದ ಅನುಭವವನ್ನು ಹಂಚಿಕೊಂಡ ಅವರು, “ತಾಯಿ ಅನ್ನಪೂರ್ಣೆ ಮತ್ತು ತಾಯಿ ಗಂಗೆಯನ್ನು ನೋಡುವುದರಿಂದ ಅಪಾರ ಶಾಂತಿ ಸಿಕ್ಕಿತು. ಅವರ ಆಶೀರ್ವಾದ ಎಲ್ಲರಿಗೂ ಸಕಾರಾತ್ಮಕ ಶಕ್ತಿಯನ್ನು ತರಲಿ” ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande