ಇಳಕಲ್ ನಲ್ಲಿ ಬೀದಿನಾಯಿಗಳ ಅಟ್ಟಹಾಸ, ಬಾಲಕಿ ಸೇರಿ ಇಬ್ಬರಿಗೆ ಗಾಯ, ನಾಗರಿಕರಲ್ಲಿ ಆತಂಕ
ಬಾಗಲಕೋಟೆ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ನಾಗರಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ದಾಳಿ ನಡೆಸುತ್ತಿರುವ ನಾಯಿಗಳು, ಇದೀಗ ಮತ್ತೆ ಬಾಲಕಿ ಹಾಗೂ ಯುವಕನ ಮೇಲೆ ದಾಳಿ ನಡೆಸಿ ಗ
ನಾಯಿ ದಾಳಿ


ದಾಳಿ


ಬಾಗಲಕೋಟೆ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ನಾಗರಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ದಾಳಿ ನಡೆಸುತ್ತಿರುವ ನಾಯಿಗಳು, ಇದೀಗ ಮತ್ತೆ ಬಾಲಕಿ ಹಾಗೂ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಕುಲಕರ್ಣಿ ಪೇಟೆಯಲ್ಲಿ ನಡೆದಿದೆ.

ಮನೆಯ ಹೊರಗೆ ನಿಂತಿದ್ದ 6 ವರ್ಷದ ಬಾಲಕಿ ಶ್ರೀನಿಧಿ ಮಡಿವಾಳ ಹಾಗೂ ಕೆಲಸದ ನಿಮಿತ್ತ ತೆರಳುತ್ತಿದ್ದ ಯಾಸೀನ್ ಸಾಬ್ ಎಂಬುವವರ ಮೇಲೆ ಬೀದಿನಾಯಿಗಳು ಏಕಾ ಏಕಿ ದಾಳಿ ನಡೆಸಿವೆ. ದಾಳಿಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಒಂದೇ ಬಡಾವಣೆಯಲ್ಲಿ ನಡೆದ ಈ ಘಟನೆಗಳಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಸರಣಿ ದಾಳಿಗಳ ಹಿನ್ನೆಲೆ, ನಾಯಿಗಳಿಗೆ ಹುಚ್ಚು ಹಿಡಿದಿರಬಹುದೆಂಬ ಶಂಕೆಯೂ ವ್ಯಕ್ತವಾಗುತ್ತಿದೆ. ಇದಕ್ಕೂ ಮುನ್ನ ಇಳಕಲ್ ನಗರದಲ್ಲಿ ಇದೇ ರೀತಿಯ ದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದು ಸಾರ್ವಜನಿಕರ ಕಳವಳವನ್ನು ಮತ್ತಷ್ಟು ಹೆಚ್ಚಿಸಿದೆ.

ಪದೇ ಪದೇ ನಡೆಯುತ್ತಿರುವ ಈ ಘಟನೆಗಳ ಹಿನ್ನೆಲೆಯಲ್ಲಿ ಸ್ಥಳೀಯರು ಮುನ್ಸಿಪಲ್ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕು, ನಾಯಿಗಳಿಗೆ ಲಸಿಕೆ ನೀಡುವುದು ಹಾಗೂ ನಿಯಂತ್ರಣ ಕ್ರಮಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದ್ದು, ಆಡಳಿತವು ಎಚ್ಚೆತ್ತುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತದೆಯೇ ಎಂಬುದು ಇದೀಗ ಕುತೂಹಲಕಾರಿ ವಿಚಾರವಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande