
ಬಾಗಲಕೋಟೆ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಅಂಜುಮನ್ ಸೊಸೈಟಿ ಸಮೀಪ ನಡೆದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಸ್ಥಳೀಯರ ಮಾಹಿತಿ ಪ್ರಕಾರ, ಇದೇ ಪ್ರದೇಶದಲ್ಲಿ ಈ ಮೊದಲು ಸಹ ಅನೇಕ ಬಾರಿ ಸಾರ್ವಜನಿಕರ ಮೇಲೆ ನಾಯಿಗಳ ದಾಳಿ ನಡೆದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಳ್ಳದಿರುವುದು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಇದರಿಂದ ಜನರು ಭಯಭೀತರಾಗಿಯೇ ರಸ್ತೆಗಳಲ್ಲಿ ಸಂಚರಿಸುವ ಪರಿಸ್ಥಿತಿ ಉಂಟಾಗಿದೆ.
ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ, ಅಗತ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande