
ಬಾಗಲಕೋಟೆ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಶುಗರ್ ಮಿಲ್ ಲಿಮಿಟೆಡ್ ಬಾಡಗಂಡಿ ಯುನಿಟ್-1 ಹಾಗೂ ರೈತರ ಸಕ್ಕರೆ ಕಾರ್ಖಾನೆ ನಿಯಮಿತ, ರನ್ನನಗರ ತಿಮ್ಮಾಪೂರದ ಬೀಳಗಿ ಶುಗರ್ ಮಿಲ್ ಲಿಮಿಟೆಡ್ ಯುನಿಟ್-2 ವತಿಯಿಂದ 2025-26ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಸಲ್ಲಬೇಕಾದ ಸಂಪೂರ್ಣ ಕಬ್ಬಿನ ಬಿಲ್ ಮೊತ್ತವನ್ನು ಪಾವತಿಸಿರುವುದಾಗಿ ಸಂಸ್ಥೆ ಪ್ರಕಟಿಸಿದೆ.
ಕಬ್ಬು ಪೂರೈಸಿದ ರೈತರಿಗೆ ಬಾಕಿ ಉಳಿದಿದ್ದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸುವ ಮೂಲಕ ರೈತರಿಗೆ ಆರ್ಥಿಕವಾಗಿ ನೆರವಾಗಲಾಗಿದೆ. ಈ ಹಿನ್ನೆಲೆಯಲ್ಲಿ ಮಿಲ್ ಆಡಳಿತ ಮಂಡಳಿ ರೈತರ ಸಹಕಾರವನ್ನು ಕೃತಜ್ಞತೆಯಿಂದ ಸ್ಮರಿಸಿದೆ.
“ರೈತ ಬಂಧುಗಳ ಸಹಕಾರದಿಂದಲೇ ಕಾರ್ಖಾನೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನಂಬಿಕೆಗೆ ಸದಾ ಬದ್ಧರಾಗಿದ್ದೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರೈತ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿರುವ ಮಿಲ್ ಆಡಳಿತ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ನಿರೀಕ್ಷಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande