ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಪೂರ್ಣ ಬಹುಮತ : ನಿತಿನ್ ನವೀನ್
ಮಿರ್ಜಾಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬುಧವಾರ ಉತ್ತರಪ್ರದೇಶದ ಮಾ ವಿಂಧ್ಯವಾಸಿನಿ ಧಾಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾದ ಅಗಸ್ತ್ಯ ಕುಮಾರ್ ದ್ವಿವೇದಿ ಹಾಗೂ ಧೀರಜ್ ಮಿಶ್ರಾ ಅವರ
ನಿತಿನ್ ನವೀನ


ಮಿರ್ಜಾಪುರ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬುಧವಾರ ಉತ್ತರಪ್ರದೇಶದ ಮಾ ವಿಂಧ್ಯವಾಸಿನಿ ಧಾಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾದ ಅಗಸ್ತ್ಯ ಕುಮಾರ್ ದ್ವಿವೇದಿ ಹಾಗೂ ಧೀರಜ್ ಮಿಶ್ರಾ ಅವರ ನೇತೃತ್ವದಲ್ಲಿ ವಿಧಿವಿಧಾನಗಳು ನೆರವೇರಿದವು. ನಂತರ ಅವರು ವಿಂಧ್ಯ ಕಾರಿಡಾರ್ ವ್ಯವಸ್ಥೆಗಳನ್ನು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿದರು.

ಈ ವೇಳೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿದ ಅವರು, ಇಂದು ನಡೆಯುತ್ತಿರುವ ಎರಡನೇ ಹಂತದ ಮತದಾನ ರಾಜ್ಯದ ಪ್ರಜಾಪ್ರಭುತ್ವದ ಮಹೋತ್ಸವದ ಪ್ರಮುಖ ದಿನವಾಗಿದೆ ಎಂದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ನವೀನ್, “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಿ, ಅಭಿವೃದ್ಧಿಯ ಹೊಸ ಗಾಥೆ ಬರೆಯಲಾಗುವುದು” ಎಂದು ಹೇಳಿದರು. ಬಿಜೆಪಿ ಸರ್ಕಾರವು ಎಲ್ಲ ವರ್ಗದ ಜನರನ್ನು ಒಳಗೊಂಡು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದರು.

“ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆ ತರಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಡಬಲ್ ಎಂಜಿನ್ ಸರ್ಕಾರವು ಬಂಗಾಳವನ್ನು ವೇಗವಾಗಿ ಅಭಿವೃದ್ಧಿಪಡಿಸುತ್ತದೆ,” ಎಂದು ಅವರು ಹೇಳಿದರು.

ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದು ಅವರ ಜವಾಬ್ದಾರಿಯೂ ಆಗಿದೆ ಎಂದು ಒತ್ತಾಯಿಸಿದ ನವೀನ್, “ಇದು ರಾಜ್ಯದ ಭವಿಷ್ಯ ನಿರ್ಧರಿಸುವ ಚುನಾವಣೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವಿಧ ಜನಪ್ರತಿನಿಧಿಗಳು ಮತ್ತು ಪಕ್ಷದ ನಾಯಕರು ಉಪಸ್ಥಿತರಿದ್ದರು. ಪೂಜೆ ಬಳಿಕ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ನಂತರ ವಾರಣಾಸಿಗೆ ಪ್ರಯಾಣ ಬೆಳೆಸಿದರು. ಅವರ ಭೇಟಿ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande