
ಕೊಪ್ಪಳ, 29 ಏಪ್ರಿಲ್ (ಹಿ.ಸ.):
ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಮೇ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಧಾರವಾಡದ ಟಾಟಾ ಮೋಟಾರ್ಸ್ ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ಐ.ಟಿ.ಐ- ಆಲ್ ಟ್ರೇಡ್ ಅಥವಾ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಡಿಪ್ಲೊಮಾ ಅಥವಾ ಇತರೆ ಪದವಿ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತ 18 ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ನೇರ ಸಂದರ್ಶನದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಉದ್ಯೋಕಾಂಕ್ಷಿಗಳು https://forms.gle/FfGRk1yakKtBEMaH8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವ0ತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್