
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮತಯಾಚನೆ ನಡೆಸಿದರು.
ಬಳಿಕ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಾಗಲಕೋಟೆ ಹಾಗೂ ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೊತೆಗೆ 2028ರ ವಿಧಾನ ಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಸಮಾವೇಶದಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ನೀವೆಲ್ಲಾ ಯಾರಿಗೆ ಮತ ಹಾಕುತ್ತೀರಿ ಎಂದು ಕೈ ಎತ್ತಿ ಹೇಳಿ” ಎಂದು ಕೇಳಿ ಕಾರ್ಯಕರ್ತರನ್ನು ಹುರುದುಂಬಿಸಿದರು.
“ದಯವಿಟ್ಟು 9ನೇ ತಾರೀಖಿನಂದು ನಡೆಯುವ ಮತದಾನದಲ್ಲಿ ಅಭ್ಯರ್ಥಿ ಉಮೇಶ್ ಮೇಟಿ ಅವರ ಸಂಖ್ಯೆ 1 ‘ಹಸ್ತ’ ಚಿಹ್ನೆಗೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು” ಎಂದು ಅವರು ಮನವಿ ಮಾಡಿದರು.“ಈ ಎರಡು ವರ್ಷಗಳ ಅವಧಿಗೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುವ ಜವಾಬ್ದಾರಿ ನಿಮ್ಮದು. 2028ರ ಚುನಾವಣೆಯಲ್ಲಿಯೂ ಅವರಿಗೇ ಟಿಕೆಟ್ ನೀಡಲಾಗುತ್ತದೆ. ಆಗಲೂ ಅವರಿಗೆ ಮತ ನೀಡಿ ಗೆಲ್ಲಿಸಬೇಕು” ಎಂದು ಮುಖ್ಯಮಂತ್ರಿ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande