ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ವಿ. ಸೋಮಣ್ಣ ಮತಯಾಚನೆ ; ಯತ್ನಾಳ್ ವಿಚಾರಕ್ಕೆ ಸ್ಪಷ್ಟನೆ
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರು ಬಾಗಲಕೋಟೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚ್ಛಾಟಿತ ಶಾಸಕ ಬಸನಗೌಡ ಪಾ
ಸೋಮಣ್ಣ


ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರು ಬಾಗಲಕೋಟೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ನಡೆಸಿದರು.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರೆದು ಪ್ರಚಾರ ಮಾಡಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು. ಯತ್ನಾಳ್ ಒಬ್ಬ ಮುತ್ಸದ್ದಿ ನಾಯಕರು ಹಾಗೂ ವಾಜಪೇಯಿ ಅವರ ಕಾಲದಲ್ಲಿ ಕೇಂದ್ರ ಸಚಿವರಾಗಿದ್ದರು. ಅವರನ್ನು ಪ್ರಚಾರಕ್ಕೆ ಆಹ್ವಾನಿಸಿದರೆ ತಪ್ಪೇನಿಲ್ಲ ಎಂದು ಹೇಳಿದರು.

ಯತ್ನಾಳ್ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ. ಹಿಂದಿನ ಕಾಲದಲ್ಲಿ ರಾಜ್ಯ ಬಿಜೆಪಿ ನಾಯಕರಿಂದ ಕೆಲವು ತಪ್ಪುಗಳು ಆಗಿರಬಹುದು, ಆದರೆ ಅದನ್ನು ಪಕ್ಷದ ವರಿಷ್ಠರು ಶೀಘ್ರದಲ್ಲೇ ಸರಿಪಡಿಸುತ್ತಾರೆ ಎಂದು ಸೋಮಣ್ಣ ತಿಳಿಸಿದರು.

ಯತ್ನಾಳ್ ಅವರು ಇದುವರೆಗೂ ಬಿಜೆಪಿ ಪಕ್ಷದ ಬಗ್ಗೆ ಅವಹೇಳನ ಮಾಡಿಲ್ಲ. ವ್ಯಕ್ತಿಗಿಂತ ಪಕ್ಷವೇ ಮುಖ್ಯವಾಗಿದ್ದು, ಅವರು ಪ್ರಚಾರಕ್ಕೆ ಬಂದಿರುವುದನ್ನು ನಾನು ಸ್ವಾಗತಿಸುತ್ತೇನೆ ಹಾಗೂ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande