
ದಾವಣಗೆರೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಇಂದು ಕುಕ್ಕವಾಡ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರ ಪರವಾಗಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು , ಕ್ಷೇತ್ರದಾದ್ಯಂತ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳು ಹಾಗೂ ಶಾಮನೂರು ಕುಟುಂಬದ ದಶಕಗಳ ನಿಸ್ವಾರ್ಥ ಸೇವೆಯ ಬಗ್ಗೆ ಜನಮಾನಸದಲ್ಲಿ ಅಭೂತಪೂರ್ವ ಅಭಿಮಾನವಿದೆ. ಕುಕ್ಕವಾಡ ಗ್ರಾಮಸ್ಥರು ನೀಡಿದ ಭವ್ಯ ಸ್ವಾಗತ ಮತ್ತು ಬೆಂಬಲವು ಕಾಂಗ್ರೆಸ್ ಪಕ್ಷದ ಗೆಲುವಿನ ಮುನ್ಸೂಚನೆಯಾಗಿದೆ ಎಂದರು.
ಬದಲಾವಣೆ ಮತ್ತು ಅಭಿವೃದ್ಧಿಯ ಪರವಾಗಿರುವ ಈ ಉತ್ಸಾಹ ಏಪ್ರಿಲ್ 9ರಂದು ನಡೆಯುವ ಮತದಾನದಲ್ಲಿ ಪ್ರತಿಫಲಿಸಲಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa