
ದಾವಣಗೆರೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ನಗರದಲ್ಲಿನ ಛಲವಾದಿ ಸಭಾ ಭವನದಲ್ಲಿ ‘ಸಂವಾದ ಸಭೆ’ ಆಯೋಜಿಸಲಾಯಿತು.
ಸಭೆಯಲ್ಲಿ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಅವರ ಪರ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲುವು ಸಾಧಿಸುವಂತೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಆನೆಕಲ್ ಶಾಸಕ ಬಿ. ಶಿವಣ್ಣ, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಪತ್ ರಾಜ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಛಲವಾದಿ ಮುಖಂಡ ರುದ್ರಮುನಿ ಸೇರಿದಂತೆ ಹಲವು ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa