
ದಾವಣಗೆರೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಚಿವ ಈಶ್ವರ ಖಂಡ್ರೆ ದಾವಣಗೆರೆಯ ಡಿಸಿಎಂ ಬಡಾವಣೆಯ ಪ್ರಮುಖರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಅವರ ಪರವಾಗಿ ಮತ ಚಲಾಯಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಬಳಿಕ ಬಡಾವಣೆಯ ಮನೆ ಮನೆಗೆ ತೆರಳಿ ಸಾರ್ವಜನಿಕರನ್ನು ಭೇಟಿ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ಪರವಾಗಿ ಮತಯಾಚನೆ ಮಾಡಿದರು.
ಜನರಿಂದ ದೊರೆತ ಆತ್ಮೀಯ ಸ್ಪಂದನೆ ಮತ್ತು ಬೆಂಬಲ ನಮ್ಮ ಗೆಲುವಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa