ಏ.05ರಂದು ಡಾ.ಬಾಬು ಜಗಜೀವನ್ ರಾಮ್ 119ನೇ ಜನ್ಮ ದಿನಾಚರಣೆ ಸಮಾರಂಭ
ಚಿತ್ರದುರ್ಗ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್‌ ರ 119ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 05ರಂದು ಬೆಳಿಗ್ಗೆ 1
ಏ.05ರಂದು ಡಾ.ಬಾಬು ಜಗಜೀವನ್ ರಾಮ್ 119ನೇ ಜನ್ಮ ದಿನಾಚರಣೆ ಸಮಾರಂಭ


ಚಿತ್ರದುರ್ಗ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್‌ ರ 119ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 05ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಲಿಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande