ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರಕ್ಕೆ ನೂತನ ಕಾರ್ಯಕಾರಿ ಮಂಡಳಿ ಆಯ್ಕೆ
ಗದಗ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ನಗರದ ಸಿದ್ದಲಿಂಗ ನಗರದಲ್ಲಿರುವ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಶ್ರೀಮನ್ನಿರಂಜನ ಯಳಂದೂರು ಬಸವಲಿಂಗ ಮಹಾಸ್ವಾಮಿಗಳವರ ಸ್ಮಾರಕ ಯೋಗಪಾಠಶಾಲೆಯಲ್ಲಿ 2026-27ನೇ ಸಾಲಿನ ಕಾರ್ಯಕಾರಿ ಮಂಡಳಿ ಹಾಗೂ ವಿವಿಧ ಸಮಿತಿಗಳ ಸದಸ್ಯರ ಆಯ್ಕೆ ಪ್ರಕ್ರಿಯೆ ನೆರವೇರಿ
ಫೋಟೋ


ಗದಗ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ನಗರದ ಸಿದ್ದಲಿಂಗ ನಗರದಲ್ಲಿರುವ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಶ್ರೀಮನ್ನಿರಂಜನ ಯಳಂದೂರು ಬಸವಲಿಂಗ ಮಹಾಸ್ವಾಮಿಗಳವರ ಸ್ಮಾರಕ ಯೋಗಪಾಠಶಾಲೆಯಲ್ಲಿ 2026-27ನೇ ಸಾಲಿನ ಕಾರ್ಯಕಾರಿ ಮಂಡಳಿ ಹಾಗೂ ವಿವಿಧ ಸಮಿತಿಗಳ ಸದಸ್ಯರ ಆಯ್ಕೆ ಪ್ರಕ್ರಿಯೆ ನೆರವೇರಿತು.

ಪೂಜ್ಯಶ್ರೀ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳವರ ಅಪ್ಪಣೆ ಮೇರೆಗೆ ನಡೆದ ಈ ಆಯ್ಕೆ ಪ್ರಕ್ರಿಯೆಯಲ್ಲಿ ಗೌರವಾಧ್ಯಕ್ಷರಾಗಿ ಅನ್ನಪೂರ್ಣ ವರವಿ, ಅಧ್ಯಕ್ಷರಾಗಿ ವಿಜಯಲಕ್ಷ್ಮೀ ಆನೆಹೊಸೂರು, ಕಾರ್ಯದರ್ಶಿಯಾಗಿ ಕವಿತಾ ಮರಿಗೌಡರ ಹಾಗೂ ಕೋಶಾಧ್ಯಕ್ಷರಾಗಿ ಜಯಶ್ರೀ ಡಾವಣಗೇರಿ ಆಯ್ಕೆಯಾಗಿದ್ದಾರೆ.

ಇದೇ ವೇಳೆ ಶಾಂತಾ ಬಿ. ಕುಂದಗೋಳ, ವೀಣಾ ಅಕ್ಕಿ, ಪ್ರೇಮಾ ಗಾಣಿಗೇರ, ಶಂಕ್ರಮ್ಮ ಮಾಳಶೆಟ್ಟಿ, ಪ್ರತಿಭಾ ಇನಾಮತಿ ಮೊದಲಾದವರು ವಿವಿಧ ಸಮಿತಿಗಳ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ವೀಣಾ ಮಾಲಿಪಾಟೀಲ ನೇಮಕಗೊಂಡಿದ್ದು, ಸಲಹಾ ಸಮಿತಿಗೆ ಶಾಂತಾ ಮುಂದಿನಮನಿ ಮತ್ತು ಸಂಗೀತಾ ನಾಕೋಡ್ ಸೇರಿದಂತೆ ಹಲವರು ಸೇರಿದ್ದಾರೆ.

ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಸೇವಾ ಮನೋಭಾವದಿಂದ ಕೇಂದ್ರದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಪ್ರತಿಜ್ಞಾವಿಧಿ ಮೂಲಕ ಬದ್ಧತೆ ವ್ಯಕ್ತಪಡಿಸಿದರು.

ಕೇಂದ್ರದ ಸಂಯೋಜಕರು ಮತ್ತು ಹಿತೈಷಿಗಳು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಕೇಂದ್ರದ ಚಟುವಟಿಕೆಗಳು ಮತ್ತಷ್ಟು ವಿಸ್ತಾರಗೊಳ್ಳಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande