
ವಿಜಯಪುರ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ದೇವರಹಿಪ್ಪರಗಿ ಕ್ಷೇತ್ರದ ಜಾಲವಾದ ಗ್ರಾಮದ ಸಮೀಪ ನಿರ್ಮಾಣಗೊಳ್ಳುತ್ತಿರುವ ವಿದ್ಯುತ್ ಪ್ರಸರಣ ಘಟಕಕ್ಕಾಗಿ ರೈತರಿಂದ ಪಡೆದ ಭೂಮಿಗೆ ಸೂಕ್ತ ಪರಿಹಾರ ನೀಡುವವರೆಗೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್ ತಿಳಿಸಿದರು.
“ನಾನೊಬ್ಬ ರೈತ. ರೈತರ ಕಷ್ಟ–ಸುಖದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ. ರೈತರಿಂದ ಪಡೆದ ಭೂಮಿಗೆ ನ್ಯಾಯಸಮ್ಮತ ಪರಿಹಾರ ದೊರಕಿಸುವವರೆಗೂ ಹೋರಾಟ ಮುಂದುವರಿಸುತ್ತೇನೆ,” ಎಂದು ಅವರು ಹೇಳಿದರು.
ಕ್ಷೇತ್ರದ ಜನಪ್ರತಿನಿಧಿಯಾಗಿ ರೈತರ ಹಿತಾಸಕ್ತಿಯನ್ನು ಕಾಪಾಡುವುದು ತನ್ನ ಹೊಣೆಗಾರಿಕೆಯಾಗಿದೆ. ರೈತರಿಗೆ ನ್ಯಾಯ ಸಿಗುವವರೆಗೂ ಅವರ ಬೆನ್ನುಲುಬಾಗಿ ನಿಲ್ಲುವುದಾಗಿ ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande