₹50 ಲಕ್ಷ ವೆಚ್ಚದಲ್ಲಿ ಅಂಜುಮಾನ್-ಎ-ಇಸ್ಲಾಂ ಸಂಸ್ಥೆಯಲ್ಲಿ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ
ವಿಜಯಪುರ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಅಂಜುಮಾನ್-ಎ-ಇಸ್ಲಾಂ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಸಭಾಭವನದ ಕಾಮಗಾರಿಗೆ ಇಂದು ಶಾಸಕ ಅ
ಭೂಮಿ ಪೂಜೆ


ವಿಜಯಪುರ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಅಂಜುಮಾನ್-ಎ-ಇಸ್ಲಾಂ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಸಭಾಭವನದ ಕಾಮಗಾರಿಗೆ ಇಂದು ಶಾಸಕ ಅಶೋಕ ಮನಗೂಳಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಭಾಭವನವು ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಸಮರ್ಪಕ ವೇದಿಕೆಯನ್ನು ಒದಗಿಸಲಿದೆ. ವಿವಿಧ ತರಬೇತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು, ಉಪನ್ಯಾಸಗಳು ಹಾಗೂ ವಿದ್ಯಾರ್ಥಿ-ಶಿಕ್ಷಕರ ಸಭೆಗಳು ನಡೆಯಲು ಈ ಕಟ್ಟಡವು ಅನುಕೂಲಕರವಾಗಲಿದೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳೆಸುವಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದರು.

ಸಂಸ್ಥೆಯ ಅಭಿವೃದ್ಧಿಗೆ ಇದು ಮಹತ್ವದ ಮೈಲುಗಲ್ಲಾಗಿದ್ದು, ಸ್ಥಳೀಯ ಸಮುದಾಯದ ಸಹಕಾರದಿಂದ ಈ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ಯೋಜನೆ ಜಾರಿಗೆ ಬಂದರೆ ಸಿಂದಗಿ ಕ್ಷೇತ್ರದ ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ದೊರೆಯಲಿದೆ ಎಂಬ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande