
ಬಳ್ಳಾರಿ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಗರದ ಹೊಸಪೇಟೆ ರಸ್ತೆಯಲ್ಲಿರುವ ಬಿ.ಐ.ಟಿ.ಎಂ. ಎಂಜಿನಿಯರಿಂಗ್ ಕಾಲೇಜ್ ಸಮೀಪದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು (ಅಲ್ಲೀಪುರ) ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿನಿಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ 60 ಮತ್ತು ವಾಣಿಜ್ಯ ವಿಭಾಗಕ್ಕೆ 60 ಸೀಟ್ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾದ ಬಾಲಕಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ನಾಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ.
ಶೇ. 75ರಷ್ಟು ಸೀಟುಗಳು ಅಲ್ಪಸಂಖ್ಯಾತರಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಮೀಸಲಾಗಿದ್ದು, ಉಳಿದ ಶೇ. 25ರಷ್ಟು ಸೀಟುಗಳನ್ನು ಎಸ್.ಸಿ, ಎಸ್.ಟಿ ಮತ್ತು ಓಬಿಸಿ ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಗುತ್ತದೆ. (ವಿಶೇಷ ಚೇತನರಿಗೆ ಶೇ. 4ರಷ್ಟು ಮೀಸಲಾತಿ ಇರಲಿದೆ).
ಅರ್ಜಿ ಸಲ್ಲಿಸಲು http://dom.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ.
ಅರ್ಹತೆ ಮತ್ತು ದಾಖಲೆಗಳು:
ಕರ್ನಾಟಕ ರಾಜ್ಯದ ಅಭ್ಯರ್ಥಿಯಾಗಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ಅರ್ಜಿ ಸಲ್ಲಿಸಲು ಅಂಕಪಟ್ಟಿ, ಹಾಲ್ ಟಿಕೆಟ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಪಾಸ್ಪೆÇೀರ್ಟ್ ಅಳತೆಯ ಭಾವಚಿತ್ರದ ಅಗತ್ಯವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಅಲ್ಲೀಪುರ, ಬಳ್ಳಾರಿ ಅಥವಾ ಮೊ.7349008289, 6360549014, 9901739242, 9886286814, 8971217895 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್