ಬಾಗಲಕೋಟೆ ಬಸ್ ನಿಲ್ದಾಣದಲ್ಲಿ ಅಕ್ಕಪಡೆ ತಂಡದಿಂದ ಜಾಗೃತಿ ಕಾರ್ಯಕ್ರಮ
ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರಲ್ಲಿ ಕಾನೂನು ಅರಿವು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುವ ಉದ್ದೇಶದಿಂದ ಅಕ್ಕಪಡೆ ತಂಡದ ವತಿಯಿಂದ ಬಾಗಲಕೋಟೆ ನಗರದ ಬಸ್ ನಿಲ್ದಾಣದಲ್ಲಿ ವಿವಿಧ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಕ್ಕಪ
ಪಡೆ


ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರಲ್ಲಿ ಕಾನೂನು ಅರಿವು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುವ ಉದ್ದೇಶದಿಂದ ಅಕ್ಕಪಡೆ ತಂಡದ ವತಿಯಿಂದ ಬಾಗಲಕೋಟೆ ನಗರದ ಬಸ್ ನಿಲ್ದಾಣದಲ್ಲಿ ವಿವಿಧ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಅಕ್ಕಪಡೆ ತಂಡದ ಸದಸ್ಯರು ಸಾರ್ವಜನಿಕರಿಗೆ ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆ, ಸೈಬರ್ ಅಪರಾಧಗಳು ಹಾಗೂ ಅವುಗಳಿಂದ ರಕ್ಷಣೆ ಪಡೆಯುವ ವಿಧಾನಗಳ ಬಗ್ಗೆ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಮೋಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಅಪರಿಚಿತ ಕರೆಗಳು, ಅನುಮಾನಾಸ್ಪದ ಲಿಂಕ್ಗಳು ಮತ್ತು ಆನ್ಲೈನ್ ವ್ಯವಹಾರಗಳಲ್ಲಿ ಜಾಗರೂಕರಾಗಿರಲು ಸೂಚಿಸಿದರು.

ಇದೇ ವೇಳೆ ರಸ್ತೆ ಸುರಕ್ಷತೆ ಕುರಿತಾಗಿ ವಿಶೇಷವಾಗಿ ಗಮನ ಸೆಳೆದು, ವಾಹನ ಚಾಲಕರು ನಿಯಮಗಳನ್ನು ಪಾಲಿಸುವುದು, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಬಳಕೆ ಕಡ್ಡಾಯವಾಗಿರುವುದು ಸೇರಿದಂತೆ ಅನೇಕ ಪ್ರಮುಖ ಅಂಶಗಳನ್ನು ತಿಳಿಸಿದರು.

ಸಾರ್ವಜನಿಕರು ತುರ್ತು ಪರಿಸ್ಥಿತಿಯಲ್ಲಿ ಬಳಸಬಹುದಾದ ಸಹಾಯವಾಣಿ ಸಂಖ್ಯೆಗಳಾದ 112 (ತುರ್ತು ಸಹಾಯವಾಣಿ), 181 (ಮಹಿಳಾ ಸಹಾಯವಾಣಿ), 1098 (ಮಕ್ಕಳ ಸಹಾಯವಾಣಿ) ಮತ್ತು 1930 (ಸೈಬರ್ ಸಹಾಯವಾಣಿ) ಕುರಿತು ಜಾಗೃತಿ ಮೂಡಿಸಲಾಯಿತು.

ಬಸ್ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮತ್ತು ಸಾರ್ವಜನಿಕರು ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡಿದರು. ಜಾಗೃತಿ ಕಾರ್ಯಕ್ರಮದ ಮೂಲಕ ಜನರಲ್ಲಿ ಕಾನೂನು ಅರಿವು ಹೆಚ್ಚಿಸುವ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮವು ಸಮಾಜದಲ್ಲಿ ಸುರಕ್ಷತೆ, ಜವಾಬ್ದಾರಿ ಮತ್ತು ಕಾನೂನು ಪಾಲನೆಯ ಮಹತ್ವವನ್ನು ಮತ್ತಷ್ಟು ಬಲಪಡಿಸುವಲ್ಲಿ ಸಹಾಯಕವಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande