ಖಾಸಗಿ ಶಾಲೆಗಳ ಸ್ಟೇಷನರಿ ಮಾರಾಟಕ್ಕೆ ವಿರೋಧ : ಪುಸ್ತಕ ವ್ಯಾಪಾರಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ
ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ನೋಟ್ಬುಕ್ ಮತ್ತು ಸ್ಟೇಷನರಿ ವಸ್ತುಗಳನ್ನು ನೇರವಾಗಿ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಬಾಗಲಕೋಟೆ ಪುಸ್ತಕ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಜಿಲ್ಲಾಧಿಕಾರಿಗಳು ಮತ್ತು ಶ
ಪುಸ್ತಕ


ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ನೋಟ್ಬುಕ್ ಮತ್ತು ಸ್ಟೇಷನರಿ ವಸ್ತುಗಳನ್ನು ನೇರವಾಗಿ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಬಾಗಲಕೋಟೆ ಪುಸ್ತಕ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಜಿಲ್ಲಾಧಿಕಾರಿಗಳು ಮತ್ತು ಶೈಕ್ಷಣಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವ್ಯಾಪಾರಸ್ಥರು ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಹೆಸರಿನಲ್ಲಿ ವ್ಯಾಪಾರಿಕರಣಕ್ಕೆ ಮುಂದಾಗಿರುವುದು ಸ್ಥಳೀಯ ಪುಸ್ತಕ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ತಮ್ಮ ಸಂಸ್ಥೆಯಲ್ಲಿಯೇ ನೋಟ್ಬುಕ್ ಮತ್ತು ಸ್ಟೇಷನರಿ ಖರೀದಿಸಲು ಒತ್ತಾಯಿಸುತ್ತಿರುವುದು ಸ್ಪರ್ಧಾತ್ಮಕ ವ್ಯಾಪಾರಕ್ಕೆ ಧಕ್ಕೆ ತರುತ್ತಿದೆ ಎಂದು ಅವರು ದೂರಿದರು.

ಈ ರೀತಿಯ ಕ್ರಮದಿಂದ ಸಣ್ಣ ಮಟ್ಟದ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಇದನ್ನು ತಕ್ಷಣ ನಿಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಅಲ್ಲದೆ, ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಗುಣಮಟ್ಟಕ್ಕೆ ಹೆಚ್ಚು ಗಮನಹರಿಸಬೇಕು ಹೊರತು ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮನವಿ ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande