ಮೇ 3 ರಂದು ಡಿಸಿಎಂ ಅವರಿಂದ ಜಿಲ್ಲಾ ಪ್ರವಾಸ
ಕೊಪ್ಪಳ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮೇ 3 ರಂದು ವಿಜಯನಗರ ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಉಪಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 7.30 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳ
District tour by DCM on May 3rd


ಕೊಪ್ಪಳ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮೇ 3 ರಂದು ವಿಜಯನಗರ ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ಉಪಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 7.30 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 9 ಗಂಟೆಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಆವರಣದ ಹೆಲಿಪ್ಯಾಡ್ಗೆ ಆಗಮಿಸುವರು. ಬೆಳಿಗ್ಗೆ 9.10 ಗಂಟೆಗೆ ಕನ್ನಡ ವಿವಿ ಆವರಣದಿಂದ ಹೊರಟು ಬೆಳಿಗ್ಗೆ 9.30 ಕ್ಕೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ಗೇಟ್ ಅಳವಡಿಕೆ ಕಾಮಗಾರಿ ಪರಿವೀಕ್ಷಣೆ ನಡೆಸುವರು.

ಬೆಳಿಗ್ಗೆ 11 ಗಂಟೆಗೆ ತುಂಗಭದ್ರಾ ಜಲಾಶಯದಿಂದ ನಿರ್ಗಮಿಸಿ 11.20 ಕ್ಕೆ ಹಂಪಿ ಕನ್ನಡ ವಿವಿ ಆವರಣ ತಲುಪುವರು. ಬೆಳಿಗ್ಗೆ 11.30 ಗಂಟೆಗೆ ಕನ್ನಡ ವಿವಿ ಆವರಣದ ಹೆಲಿಪ್ಯಾಡ್ನಿಂದ ಹೊರಟು ರಾಯಚೂರಿನ ಸಿಂಧನೂರಿನ ಕಡೆಗೆ ಪ್ರಯಾಣ ಬೆಳೆಸುವರು ಎಂದು ಉಪಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande