ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ ಗದಗ ಸರಕಾರಿ ಪದವಿ ಪೂರ್ವ ಕಾಲೇಜು
ಸ್ಥಾನ
ಫೋಟೋ


ಗದಗ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಮೃದ್ಧಿ ಸಿದ್ಲಿಂಗ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಸಮೃದ್ಧಿ ಸಿದ್ಲಿಂಗ ಅವರು ವಿಜ್ಞಾನ ವಿಭಾಗದಲ್ಲಿ ೬೦೦ಕ್ಕೆ ೫೯೫ ಅಂಕಗಳನ್ನು ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ರಾಜ್ಯದ ಜನರಲ್ ರ್ಯಾಂಕಿ0ಗ್ ನಲ್ಲಿ ೫ನೇ ಸ್ಥಾನ, ಜಿಲ್ಲೆಗೆ ಮೊದಲ ಸ್ಥಾನ, ಹಾಗೂ ರಾಜ್ಯದ ಸರಕಾರಿ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದು ಅತ್ಯುತ್ತಮ ಸಾಧನೆಗೈದಿದ್ದಾರೆ.

ಕಾಲೇಜು ಅಭಿವೃಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿದ್ದಲಿಂಗೇಶ್ವರ ಎಚ್. ಪಾಟೀ ಅವರು ಮಾತನಾಡಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಕೀರ್ತಿ ಸಮೃದ್ಧಿ ಸಿದ್ಲಿಂಗ ಅವರಿಗೆ ಸಲ್ಲುತ್ತದೆ. ಗದಗ ಸರಕಾರಿ ಪದವಿ ಪೂರ್ವ ಕಾಲೇಜು, ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹರ್ಷವ್ಯಕ್ತಪಡಿಸಿದ್ದಾರೆ.

ಕಾನೂನು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಕೆ. ಪಾಟೀಲ ಅವರು, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಸಾಧ್ಯ ಎಂದು ತೋರಿಸಿಕೊಟ್ಟ ಸಮೃದ್ಧಿ ಸಿದ್ಲಿಂಗ, ಅವರ ಪೋಷಕರಿಗೆ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜು ಗದಗನ ಎಲ್ಲಾ ಉಪನ್ಯಾಸಕರಿಗೆ, ಪ್ರಾಚಾರ್ಯರಿಗೆ, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರಿಗೆ ಅಭಿನಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande