ಖೇಲೋ ಇಂಡಿಯಾ ತರಬೇತಿ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಕೊಪ್ಪಳ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಸುತ್ತೋಲೆಯನ್ವಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಖೇಲೋ ಇಂಡಿಯಾ ಉನ್ನತ ಕ್ರೀಡಾ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಹೊಸ ಖೇಲೋ ಇಂಡಿಯಾ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಖಾಸಗಿ ಸಂಸ್ಥೆಗಳಿ
ಖೇಲೋ ಇಂಡಿಯಾ ತರಬೇತಿ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ


ಕೊಪ್ಪಳ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಸುತ್ತೋಲೆಯನ್ವಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಖೇಲೋ ಇಂಡಿಯಾ ಉನ್ನತ ಕ್ರೀಡಾ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಹೊಸ ಖೇಲೋ ಇಂಡಿಯಾ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಖಾಸಗಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳು, ನಿಯಮಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇಲ್ಲಿ ಅಥವಾ ಕಚೇರಿಯ ದೂರವಾಣಿ ಸಂಖ್ಯೆ 08539-230121 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande