
ಕೊಪ್ಪಳ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2026ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಜಾತ್ರಾ ಕಾಲದಲ್ಲಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ವಾಹನಗಳನ್ನು ನಿಲ್ಲಿಸಲು ಕೋರಮಂಡಲ ಫ್ಯಾಕ್ಟರಿ ಜಾಗ ಹಾಗೂ ರೈಲ್ವೆ ಗೇಟಿನ ಆಚೆ ಬದಿಯಲ್ಲಿ ಹೊಸ ತುಂಗಭದ್ರ ಪ್ರೌಢಶಾಲೆಯ ಮುಂದಿನ ಬಯಲಿನಲ್ಲಿ ಹಾಗೂ ದೇವಸ್ಥಾನದ ನದಿ ಕಡೆ ಹೋಗುವ ಗೋಪುರದ ಹಿಂದಿನ ಬಯಲು ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಜಾತ್ರೆಯ ಪ್ರಮುಖ ದಿನಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ಕಮಾನಿನ ಒಳಗಡೆ ಬಿಡದಂತೆ ಹಾಗೂ ಜಾತ್ರಾ ಕಾಲದಲ್ಲಿ ಜನಸಂದಣಿ ತುಂಬಾ ಇರುವುದರಿಂದ, ಕಳ್ಳತನ ಪ್ರಕರಣಗಳು ತುಂಬ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕಳ್ಳತನ, ಜೂಜಾಟಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.
ಪೊಲೀಸ್ ಬಂದೋಬಸ್ತ್: ಆರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕರ್ತವ್ಯ ನಿರ್ವಹಿಸಲು ಹಾಗೂ ಮುನಿರಾಬಾದ್ ಠಾಣಾ ಪೆÇಲೀಸರು ಸಹಕಾರ ನೀಡುವುದಾಗಿ ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಸಭೆಯ ಗಮನಕ್ಕೆ ತಂದರು. ಮೇ 10 ರಿಂದ 14ರ ವರೆಗೆ ಜಾತ್ರೆ ಇರುವುದರಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಜಾತ್ರೆಗೆ ಬಂದೋಬಸ್ತ್ ಒದಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಆರಕ್ಷಕ ಸಿಬ್ಬಂದಿಗಳನ್ನು ಬಂದೋಬಸ್ತ್ ಗೆ ನಿಯೋಜಿಸಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗೃಹ ರಕ್ಷಕ ದಳದವರನ್ನು ನಿಯೋಜಿಸಲು ವ್ಯವಸ್ಥೆ ಮಾಡಬೇಕು. ಜಾತ್ರೆಯ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲು, ಕ್ಷೇತ್ರದಲ್ಲಿ ಕಳ್ಳತನಗಳು, ಜೂಜಾಟಗಳನ್ನು ನಿಯಂತ್ರಿಸಲು ಅಹಿತಕರ ಘಟನೆಗಳು ಜರುಗದಂತೆ ತಾತ್ಕಾಲಿಕ ಹೊರ ಠಾಣೆಯ ವ್ಯವಸ್ಥೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆರಕ್ಷಕ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕರ್ತವ್ಯ ನಿರ್ವಹಿಸಲು ಹಾಗೂ ಭಕ್ತಾದಿಗಳಿಗೆ ತಿಳುವಳಿಕೆಯನ್ನು ನೀಡಲು ಸೂಚನಾ ಫಲಕಗಳನ್ನು ಮತ್ತು ಧ್ವನಿವರ್ಧಕಗಳನ್ನು ಹಾಗೂ ದೇವಾಲಯದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಸಿ.ಸಿ.ಕ್ಯಾಮರಾಗಳು ಇರುವುದಾಗಿ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಸಭೆಯ ಗಮನಕ್ಕೆ ತಂದರು.
ಪೊಲೀಸ್ ರ ಬೇಡಿಕೆಗನುಗುಣವಾಗಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕೆಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಜಿಲ್ಲಾ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ: ಡಿಸಿ
ಕೊಪ್ಪಳ
2026ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಜಾತ್ರಾ ಕಾಲದಲ್ಲಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ವಾಹನಗಳನ್ನು ನಿಲ್ಲಿಸಲು ಕೋರಮಂಡಲ ಫ್ಯಾಕ್ಟರಿ ಜಾಗ ಹಾಗೂ ರೈಲ್ವೆ ಗೇಟಿನ ಆಚೆ ಬದಿಯಲ್ಲಿ ಹೊಸ ತುಂಗಭದ್ರ ಪ್ರೌಢಶಾಲೆಯ ಮುಂದಿನ ಬಯಲಿನಲ್ಲಿ ಹಾಗೂ ದೇವಸ್ಥಾನದ ನದಿ ಕಡೆ ಹೋಗುವ ಗೋಪುರದ ಹಿಂದಿನ ಬಯಲು ಪ್ರದೇಶದಲ್ಲಿ ಪಾಕಿರ್ಂಗ್ ವ್ಯವಸ್ಥೆ ಮಾಡಲು ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಜಾತ್ರೆಯ ಪ್ರಮುಖ ದಿನಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ಕಮಾನಿನ ಒಳಗಡೆ ಬಿಡದಂತೆ ಹಾಗೂ ಜಾತ್ರಾ ಕಾಲದಲ್ಲಿ ಜನಸಂದಣಿ ತುಂಬಾ ಇರುವುದರಿಂದ, ಕಳ್ಳತನ ಪ್ರಕರಣಗಳು ತುಂಬ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕಳ್ಳತನ, ಜೂಜಾಟಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.
ಪೊಲೀಸ್ ಬಂದೋಬಸ್ತ್: ಆರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕರ್ತವ್ಯ ನಿರ್ವಹಿಸಲು ಹಾಗೂ ಮುನಿರಾಬಾದ್ ಠಾಣಾ ಪೆÇಲೀಸರು ಸಹಕಾರ ನೀಡುವುದಾಗಿ ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಸಭೆಯ ಗಮನಕ್ಕೆ ತಂದರು. ಮೇ 10 ರಿಂದ 14ರ ವರೆಗೆ ಜಾತ್ರೆ ಇರುವುದರಿಂದ ಹೆಚ್ಚಿನ ಪೆÇಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಜಾತ್ರೆಗೆ ಬಂದೋಬಸ್ತ್ ಒದಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಆರಕ್ಷಕ ಸಿಬ್ಬಂದಿಗಳನ್ನು ಬಂದೋಬಸ್ತ್ ಗೆ ನಿಯೋಜಿಸಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗೃಹ ರಕ್ಷಕ ದಳದವರನ್ನು ನಿಯೋಜಿಸಲು ವ್ಯವಸ್ಥೆ ಮಾಡಬೇಕು. ಜಾತ್ರೆಯ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲು, ಕ್ಷೇತ್ರದಲ್ಲಿ ಕಳ್ಳತನಗಳು, ಜೂಜಾಟಗಳನ್ನು ನಿಯಂತ್ರಿಸಲು ಅಹಿತಕರ ಘಟನೆಗಳು ಜರುಗದಂತೆ ತಾತ್ಕಾಲಿಕ ಹೊರ ಠಾಣೆಯ ವ್ಯವಸ್ಥೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆರಕ್ಷಕ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕರ್ತವ್ಯ ನಿರ್ವಹಿಸಲು ಹಾಗೂ ಭಕ್ತಾದಿಗಳಿಗೆ ತಿಳುವಳಿಕೆಯನ್ನು ನೀಡಲು ಸೂಚನಾ ಫಲಕಗಳನ್ನು ಮತ್ತು ಧ್ವನಿವರ್ಧಕಗಳನ್ನು ಹಾಗೂ ದೇವಾಲಯದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಸಿ.ಸಿ.ಕ್ಯಾಮರಾಗಳು ಇರುವುದಾಗಿ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಸಭೆಯ ಗಮನಕ್ಕೆ ತಂದರು.
ಪೊಲೀಸ್ ರ ಬೇಡಿಕೆಗನುಗುಣವಾಗಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕೆಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್