
ಅಮೃತಸರ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಂಜಾಬ್ ನಲ್ಲಿ ಸಂಘಟಿತ ಅಪರಾಧಗಳ ವಿರುದ್ಧ ಮಹತ್ವದ ಕ್ರಮವಾಗಿ ಪಂಜಾಬ್ ನ ಅಮೃತಸರ ಕಮಿಷನರೇಟ್ ಪೊಲೀಸರು ಗಡಿಯಾಚೆಗಿನ ಮಾದಕವಸ್ತು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಂಜಾಬ್ ಡಿಜಿಪಿ ನೀಡಿರುವ ಮಾಹಿತಿ ಪ್ರಕಾರ, ಕಾರ್ಯಾಚರಣೆಯಲ್ಲಿ 4.108 ಕೆಜಿ ಹೆರಾಯಿನ್, 4 ಅತ್ಯಾಧುನಿಕ ಪಿಸ್ತೂಲುಗಳು ಹಾಗೂ 5 ಜೀವಂತ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಪಂಜಾಬ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಜಾಲಕ್ಕೆ ದೊಡ್ಡ ಹೊಡೆತ ನೀಡಲಾಗಿದೆ.
ಪ್ರಾಥಮಿಕ ತನಿಖೆಯಿಂದ ತಿಳಿದುಬಂದಂತೆ, ಬಂಧಿತರು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರೊಂದಿಗೆ ಸಂಪರ್ಕದಲ್ಲಿದ್ದು, ರಾಜ್ಯದ ಒಳನಾಡಿನಲ್ಲಿ ವಿತರಣೆಗಾಗಿ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳನ್ನು ಸ್ವೀಕರಿಸುತ್ತಿದ್ದರು.
ಈ ಸಂಬಂಧ ಅಮೃತಸರದ ಪಿಎಸ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಜಾಲದ ಸಂಪರ್ಕಗಳನ್ನು ಪತ್ತೆಹಚ್ಚಲು ಮತ್ತು ಇತರ ಸಹಚರರನ್ನು ಗುರುತಿಸಲು ಪೊಲೀಸರು ವ್ಯಾಪಕ ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa