
ಕೋಲಾರ, ೩೦ ಏಪ್ರಿಲ್ (ಹಿ.ಸ) :
ಆ್ಯಂಕರ್ : ತಾಲೂಕಿನ ಹೋಳೂರು ಭಾಗದಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವಾಗಿದೆ ಎಂದು ಸಮಿತಿ ಸದಸ್ಯರು ಪ್ರಶ್ನೆ ಮಾಡಿದರೆ ಅವರ ಮನೆ ಮುಂದೆ ಹೋಗಿ ಗಲಾಟೆ ಮಾಡಿದ್ದಾರೆ ಇದಕ್ಕೆಲ್ಲ ಕಾರಣ ಆಹಾರ ಇಲಾಖೆಯೇ ನೇರ ಹೊಣೆಯಾಗಿದೆ ಕೂಡಲೇ ನ್ಯಾಯಬೆಲೆ ಅಂಡಿಯ ಅನುಮತಿ ರದ್ದು ಮಾಡಿ ಇಂತಹ ಘಟನೆಗಳು ನಡೆದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ ನೀಡಿದರು.
ನಗರದ ತಾಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಸಮಿತಿ ಬಂದ ದಿನಗಳಿಂದ ತಹಶಿಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಸೊಸೈಟಿಗಳ ಸಭೆ ಕರೆದು ಚರ್ಚೆ ನಡೆಸಬೇಕಾಗಿತ್ತು ಇದುವರೆಗೂ ಸಾಧ್ಯವಾಗಲಿಲ್ಲ ಕೂಡಲೇ ಸಭೆ ನಡೆಸಲು ದಿನಾಂಕ ನಿಗದಿ ಮಾಡಬೇಕು ಕೆಲವು ಕಡೆಯಲ್ಲಿ ಅಂತ್ಯೋದಯ ಕಾರ್ಡ್ ಗಳಿಗೆ ಏಳು ಕೆಜಿ ಅಕ್ಕಿ ಕಡಿಮೆ ನೀಡುವ ದೂರುಗಳಿವೆ ಪರಿಶೀಲನೆ ಮಾಡಬೇಕು ಎಂದರು.
ಪAಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟ ಕಡೆಯ ಜನಕ್ಕೆ ತಲುಪುವಂತೆ ಮಾಡಬೇಕು ಮನೆಗೆ ಐದು ಗ್ಯಾರಂಟಿ ಮನೆ ಮುಂದೆ ರಂಗೋಲಿ ಕಾರ್ಯಕ್ರಮದ ಮೂಲಕ ಸಂಭ್ರಮ ಮಾಡಬೇಕು ಈ ಕಾರ್ಯಕ್ರಮ ಪ್ರತಿ ಗ್ರಾಮದ ಪ್ರತಿಯೊಂದು ಮನೆ ಮುಂದೆ ನಡೆಸಬೇಕು ಇದಕ್ಕೆ ಪಂಚಾಯಿತಿ ಮಟ್ಟದಲ್ಲಿ ಪಿಡಿಒ ನೇತೃತ್ವದಲ್ಲಿ ಸಭೆಗಳನ್ನು ಮಾಡಬೇಕು ಜೊತೆಗೆ ಪ್ರತಿಯೊಂದು ಕಾಲೇಜುಗಳಲ್ಲಿ ಯುವನಿಧಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಬೇಕು ಯೋಜನೆಗಳು ಬಡವರ ಅಭಿವೃದ್ಧಿಗಾಗಿ ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಅವರಿಗೆ ತಲುಪಿಸುವಲ್ಲಿ ನಿಟ್ಟಿನಲ್ಲಿ ಸಂಬ0ಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ತಾಪಂ ಇಒ ಹಾಗೂ ಸಮಿತಿಯ ಕಾರ್ಯದರ್ಶಿ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸೇರಿದಂತೆ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್