
ಕೋಲಾರ, ೩೦ ಏಪ್ರಿಲ್ (ಹಿ.ಸ) :
ಆ್ಯಂಕರ್ : ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನ ೧ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿಶ್ರಾಂತಿ ನೀಡುವುದು ಗುತ್ತಿದಾರರ, ಮಾಲೀಕರ ಜವಾಬ್ದಾರಿಯಾಗಿದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಹಾಗೂ ಕಾರ್ಮಿಕರ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಕೆಲವು ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದ್ದಾರೆ.
ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ಮಾಡುವುದು ಗುತ್ತಿಗೆದಾರರ, ಮಾಲೀಕರ ಜವಾಬ್ದಾರಿಯಾಗಿದೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬAಧಿಸಿದ ಗುತ್ತಿಗೆದಾರರು, ಮಾಲೀಕರು ನೇರ ಹೊಣೆಗಾರರಾಗಿರುತ್ತಾರೆಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್