
ಬಳ್ಳಾರಿ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ಮೇ 3ರ ಭಾನುವಾರ ಸಂಜೆ 6 ಗಂಟೆಗೆ ವಿಜಯಪುರ-ಗದಗ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾಗಿರುವ ನಿರ್ಭಯಾನಂದ ಸರಸ್ವತಿ ಅವರಿಂದ `ಸ್ವಾಮಿ ವಿವೇಕಾನಂದರ ಜೀವನ ಸಂದೇಶ’ ಕುರಿತು ವಿಶೇಷ ಉಪನ್ಯಾಸ `ವಿವೇಕಲೀಲಾಮೃತ’ ನಡೆಯಲಿದೆ.
ಈ ವೇದಿಕೆಯಲ್ಲಿ ಹಿರಿಯ ರಂಗಭೂಮಿ ಕಲಾವಿದೆ ವೀಣಾ ಆದವಾನಿ ಅವರು ಹೇಮರೆಡ್ಡಿ ಮಲ್ಲಮ್ಮ ನಾಟಕದ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸುವರು. ಮುದ್ದಟನೂರು ಹೆಚ್.ತಿಪ್ಪೇಸ್ವಾಮಿ ಹಾರ್ಮೋನಿಯಂ ಹಾಗೂ ಯೋಗೀಶ್ ಸಂಗನಕಲ್ಲು ತಬಲಾ ಸಾಥ್ ನೀಡಲಿದ್ದಾರೆ.
ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾಗಿರುವ ವೈ. ನಾರಾಯಣರೆಡ್ಡಿ ವದ್ದಟ್ಟಿ ಹಾಗೂ ಜನತಾಬಜಾರ್ನ ನೂತನ ಅಧ್ಯಕ್ಷೆ ಶ್ರೀಮತಿ ಪಲ್ಲೇದ ಮೈತ್ರಿ ಬಸವರಾಜ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್