
ಬಳ್ಳಾರಿ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ಕೌಲ್ ಬಜಾರ್ ವ್ಯಾಪ್ತಿಯಲ್ಲಿ ಬರುವ ವಕ್ಫ್ ಸಂಸ್ಥೆಯಾದ ಯಾಸಿನ್ ಸಾಬ್ ಮಸ್ಜಿದ್(ಸುನ್ನಿ) ವಕ್ಫ್ ಸಂಸ್ಥೆಗೆ ಹೊಸ ಸಮಿತಿ ರಚಿಸುವ ನಿಮಿತ್ತ ಮೇ 05 ರಿಂದ 12 ರ ವರೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿ ನೂರ್ ಪಾಷಾ ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಚುನಾವಣಾ ನಾಮಪತ್ರವನ್ನು ಮೇ 05 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 01.30 ಗಂಟೆಯ ವರೆಗೆ ಜಿಲ್ಲಾ ವಕ್ಫ್ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಮೇ 12 ರ ಮಧ್ಯಾಹ್ನ 01.30 ಗಂಟೆಯ ಒಳಗಾಗಿ ಸಲ್ಲಿಸಬಹುದು.
ನಾಮಪತ್ರ ಪರಿಶೀಲನೆ ಮೇ 13 ರ ಬೆಳಿಗ್ಗೆ 11.30 ಗಂಟೆಯಿಂದ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 14 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯ ವರೆಗೆ ಅವಕಾಶವಿದೆ. ಅದೇ ದಿನ ಮಧ್ಯಾಹ್ನ 02.30 ರ ನಂತರ ಚುನಾವಣಾ ಚಿನ್ಹೆಗಳ ಹಂಚಿಕೆ ಮಾಡಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಮೇ 23 ರ ಶನಿವಾರ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಕೌಲ್ ಬಜಾರ್ ನ 1ನೇ ರೈಲ್ವೆ ಗೇಟ್ ಹತ್ತಿರದ ಮೊಹಮ್ಮದಿಯಾ ಶಾಲೆ ಮತ್ತು ಕಾಲೇಜಿನಲ್ಲಿ ಚುನಾವಣೆ ನಡೆಸಿ, ಅದೇ ದಿನ ಸಂಜೆ 04 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕಲಬುರಗಿ ವಿಭಾಗದ ವಿಭಾಗೀಯ ವಕ್ಪ್ ಅಧಿಕಾರಿ ಹಾಗೂ ಕೌಲ್ ಬಜಾರ್ ಯಾಸೀನ್ ಸಾಬ್ ಮಸ್ಜಿದ್(ಸುನ್ನಿ) ಚುನಾವಣಾಧಿಕಾರಿ ನೂರ್ ಪಾಷಾ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್