
ಕೊಪ್ಪಳ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಗ್ನಿಪಥ್ ಸೇನಾ ನೇಮಕಾತಿಯಡಿ ವಿವಿಧ ವಿಭಾಗಗಳಲ್ಲಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ.
ಈ ನೇಮಕಾತಿಯಲ್ಲಿ ಅಗ್ನಿಪಥ್ ಹುದ್ದೆಗಳಿಗೆ ಜಾಯಿನ್ ಇಂಡಿಯನ್ ಆರ್ಮಿ ವೆಬ್ಸೈಟ್ www.joinindianarmy.nic.in ಮೂಲಕ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅರ್ಹ ಪುರುಷ ಅಭ್ಯರ್ಥಿಗಳು ಏಪ್ರಿಲ್ 10 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೊಪ್ಪಳ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಬೆಳಗಾವಿ ಸೇನಾ ನೇಮಕಾತಿ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್