ಮೂರು ದೇಶಗಳ ಪಾಸ್ಪೋರ್ಟ : ಅಸ್ಸಾಂ ಮುಖ್ಯಮಂತ್ರಿ ಪತ್ನಿ ವಿರುದ್ಧ ಕಾಂಗ್ರೆಸ್ ಆರೋಪ
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಸ್ಸಾಂ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ಪಕ್ಷ ಗಂಭೀರ ಆರೋಪಗಳನ್ನು ಹೊರಿಸಿದೆ. ಕಾಂಗ್ರೆಸ್ ಮಾಧ್ಯಮ ವಿಭ
ಪವನ್ ಖೇರಾ


ನವದೆಹಲಿ, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಅಸ್ಸಾಂ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ಪಕ್ಷ ಗಂಭೀರ ಆರೋಪಗಳನ್ನು ಹೊರಿಸಿದೆ.

ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ ಖೇರಾ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಿಂಕಿ ಭುಯಾನ್ ಶರ್ಮಾ ಮೂರು ದೇಶಗಳಾದ ಯುನೈಟೆಡ್ ಅರಬ್ ಎಮಿರೇಟ್ಸ್, ಆಂಟಿಗುವಾ ಮತ್ತು ಬಾರ್ಬುಡಾ ಮತ್ತು ಈಜಿಪ್ಟ್ ಪಾಸ್ಪೋರ್ಟ್ಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದರು. ಭಾರತದಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲದ ಹಿನ್ನೆಲೆ, ಈ ವಿಚಾರ ಗಂಭೀರ ತನಿಖೆಗೆ ಒಳಪಡಬೇಕಿದೆ ಎಂದು ಅವರು ಒತ್ತಾಯಿಸಿದರು.

ಖೇರಾ ನೀಡಿದ ಮಾಹಿತಿಯ ಪ್ರಕಾರ, ಯುಎಇ ಪಾಸ್ಪೋರ್ಟ್ 2022ರ ಮಾರ್ಚ್ 14ರಂದು ನೀಡಲಾಗಿದ್ದು 2027ರವರೆಗೆ ಮಾನ್ಯವಿದೆ. ಆಂಟಿಗುವಾ-ಬಾರ್ಬುಡಾ ಪಾಸ್ಪೋರ್ಟ್ 2021ರ ಆಗಸ್ಟ್ 26ರಂದು ನೀಡಲಾಗಿದ್ದು 2031ರವರೆಗೆ ಮಾನ್ಯವಿದೆ. ಇದೇ ವೇಳೆ ಈಜಿಪ್ಟ್ ಪಾಸ್ಪೋರ್ಟ್ 2022ರ ಫೆಬ್ರವರಿ 13ರಂದು ನೀಡಲಾಗಿದ್ದು 2029ರವರೆಗೆ ಮಾನ್ಯವಿದೆ ಎಂದು ತಿಳಿಸಿದರು.

ಇದೇ ವೇಳೆ, ರಿಂಕಿ ಭುಯಾನ್ ಶರ್ಮಾ ದುಬೈನಲ್ಲಿ ಎರಡು ಆಸ್ತಿಗಳನ್ನು ಹೊಂದಿದ್ದು, ಅವುಗಳನ್ನು ಚುನಾವಣಾ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ ಎಂಬ ಆರೋಪವನ್ನೂ ಕಾಂಗ್ರೆಸ್ ಮುಂದಿಟ್ಟಿದೆ. ಚುನಾವಣಾ ಅಭ್ಯರ್ಥಿಗಳು ತಮ್ಮ ಮತ್ತು ಕುಟುಂಬದ ಆಸ್ತಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿರುವುದರಿಂದ, ಈ ವಿಷಯವು ಕಾನೂನುಬದ್ಧ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಖೇರಾ ಹೇಳಿದರು.

ಅದೇ ರೀತಿ, ಅಮೆರಿಕದ ವ್ಯೋಮಿಂಗ್ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಯೊಂದರಲ್ಲಿ ಮುಖ್ಯಮಂತ್ರಿ ಕುಟುಂಬದ ಸದಸ್ಯರ ಹೆಸರುಗಳೂ ಸೇರಿವೆ ಎಂದು ಆರೋಪಿಸಿ, ಆ ಕಂಪನಿಯ ಬೃಹತ್ ಆರ್ಥಿಕ ವ್ಯವಹಾರಗಳ ಕುರಿತು ಸಂಶಯ ವ್ಯಕ್ತಪಡಿಸಿದರು.

ಈ ಎಲ್ಲಾ ಆರೋಪಗಳ ಹಿನ್ನೆಲೆ, ವಿಶೇಷ ತನಿಖಾ ತಂಡ ರಚಿಸಿ ವಿಚಾರಣೆ ನಡೆಸುವಂತೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande