ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಕಲಾವಿದರ ಸನ್ಮಾನ
ಗದಗ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗನ ಬೆಟಗೇರಿಯ ಶ್ರೀಕಾಳಿಕಾ ದೇವಿ ಸಮುದಾಯ ಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಹಾಗೂ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ (ರಿ), ಗದಗ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ
ಫೋಟೋ


ಗದಗ, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗನ ಬೆಟಗೇರಿಯ ಶ್ರೀಕಾಳಿಕಾ ದೇವಿ ಸಮುದಾಯ ಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಹಾಗೂ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ (ರಿ), ಗದಗ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ದೊಡ್ಡಾಟ ಕಲಾವಿದರಾದ ಪ್ರಕಾಶ ಬಡಿಗೇರ ಹಾಗೂ ಶ್ರೀಕ್ಷೇತ್ರ ವರವಿಯ ಮೌನೇಶ್ವರ ದೇವಸ್ಥಾನ ಮತ್ತು ಮಠದ ವಿಕಾಸ ಟ್ರಸ್ಟ್ನ ನೂತನ ಸದಸ್ಯರಾದ ಶ್ರೀಧರ ಕೊಣ್ಣೂರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಅವರ ಕಲಾ ಸೇವೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಉಪಸ್ಥಿತರು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ರಂಗ ಕಲಾವಿದ ಪ್ರೊ. ಮುರಲೀಧರ ಸಂಕನೂರ ಅವರು, ರಂಗಭೂಮಿ ಕಲೆ ಸಮಾಜದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಮಹತ್ವದ ಮಾಧ್ಯಮವಾಗಿದ್ದು, ಇಂತಹ ಕಾರ್ಯಕ್ರಮಗಳು ಯುವಪೀಳಿಗೆಯಲ್ಲಿ ಕಲೆಯ ಅರಿವು ಮೂಡಿಸುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಕಡ್ಲಿಕೊಪ್ಪ, ಅಧ್ಯಾಪಕ ವಿಶ್ವನಾಥ ಯ. ಕಮ್ಮಾರ, ರಂಗ ನಿರ್ದೇಶಕ ಫಣೀಂದ್ರಚಾರ್ಯ ದ್ಯಾಮೇನಹಳ್ಳಿ, ರಂಗ ಕಲಾವಿದ ವಿಜಯಕುಮಾರ ಜಿತೂರಿ ಹಾಗೂ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಮೌನೇಶ ಸಿ. ಬಡಿಗೇರ (ನರೇಗಲ್ಲ) ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande