ಜನರನ್ನು ಸಂಕಷ್ಟಗಳ ಸಾಲಿನಲ್ಲಿ ನಿಲ್ಲಿಸುವುದೇ ಬಿಜೆಪಿ ಸಿದ್ದಾಂತ : ಬಿ.ಕೆ. ಹರಿಪ್ರಸಾದ್
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಆಡಳಿತಾತ್ಮಕ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅವರು, “ಜನರನ್ನು ಸಂಕಷ್ಟಗಳ ಸರದಿ ಸಾಲಿನಲ್ಲಿ ನಿಲ್ಲಿಸುವುದೇ ಅಭಿವೃದ್ಧಿ ಎಂಬ ಹೊಸ ರಾಜಕೀಯ ಸಿದ್ಧಾಂತವನ್
Bkh post


ಬೆಂಗಳೂರು, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಆಡಳಿತಾತ್ಮಕ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅವರು, “ಜನರನ್ನು ಸಂಕಷ್ಟಗಳ ಸರದಿ ಸಾಲಿನಲ್ಲಿ ನಿಲ್ಲಿಸುವುದೇ ಅಭಿವೃದ್ಧಿ ಎಂಬ ಹೊಸ ರಾಜಕೀಯ ಸಿದ್ಧಾಂತವನ್ನು ದೇಶಕ್ಕೆ ಪರಿಚಯಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಟೀಕಿಸಿ, ನೋಟು ರದ್ದತಿ ನಿರ್ಧಾರದಿಂದ ಸಾಮಾನ್ಯ ಜನರು ತೊಂದರೆ ಅನುಭವಿಸಿದರೆ, ಕಪ್ಪುಹಣ ಹೊಂದಿದವರು ತಪ್ಪಿಸಿಕೊಂಡರು ಎಂದು ಆರೋಪಿಸಿದ್ದಾರೆ. ಮಧ್ಯಮ ವರ್ಗ ಮತ್ತು ಬಡ ಜನರು ತಮ್ಮದೇ ಹಣಕ್ಕಾಗಿ ಬ್ಯಾಂಕ್ ಮತ್ತು ಎಟಿಎಂ ಮುಂದೆ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಹೇಳಿದ್ದಾರೆ.

ಕೋವಿಡ್ ಮಹಾಮಾರಿ ವೇಳೆ ಸರ್ಕಾರದ ನಿರ್ವಹಣೆಯನ್ನೂ ಪ್ರಶ್ನಿಸಿದ ಅವರು, ಆಸ್ಪತ್ರೆಗಳು ಮತ್ತು ಸ್ಮಶಾನಗಳ ಮುಂದೆ ಜನರು ಸಾಲಿನಲ್ಲಿ ನಿಲ್ಲಬೇಕಾದ ದುಸ್ಥಿತಿ ಉಂಟಾಯಿತು ಎಂದು ಆರೋಪಿಸಿದರು. ಆಮ್ಲಜನಕ ಕೊರತೆಯಿಂದ ಅನೇಕರು ಪ್ರಾಣ ಕಳೆದುಕೊಂಡರು ಎಂದರು.

ಇತ್ತೀಚಿನ ದಿನಗಳಲ್ಲಿಯೂ ಪೆಟ್ರೋಲ್ ಬಂಕ್ಗಳು ಹಾಗೂ ಅಡುಗೆ ಅನಿಲ ವಿತರಣೆ ಕೇಂದ್ರಗಳ ಮುಂದೆ ಜನರು ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳು ಜನವಿರೋಧಿಯಾಗಿದ್ದು, ಸಾಮಾನ್ಯ ಜನರ ಬದುಕಿಗೆ ಭಾರವಾಗಿವೆ ಎಂದು ಟೀಕಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande