

ಕೊಪ್ಪಳ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದೇಶದ ಹಸಿವು ನೀಗಿಸಿದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 119ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಭಾನುವಾರ ಆಚರಿಸಲಾಯಿತು.
ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಡಾ. ಬಾಬು ಜಗಜೀವನ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಾರ್ತಾ ಇಲಾಖೆಯ ಸಿಬ್ಬಂದಿ ತಿಪ್ಪಯ್ಯ ನಾಯ್ಡು ಎನ್., ಹೊರಗುತ್ತಿಗೆ ಸಿಬ್ಬಂದಿ ಮಂಜುನಾಥ, ಅಪ್ರೆಂಟಿಶಿಪ್ ಅಭ್ಯರ್ಥಿ ಕಿರಣ್ ಕುಮಾರ್ ಮತ್ತು ಲಕ್ಷ್ಮೀಕಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್