ಬಾಬು ಜಗಜೀವನ ರಾಮ್ ಜಯಂತಿ ; ಅಮಿತ್ ಶಾ ನಮನ
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಬಾಬು ಜಗಜೀವನ ರಾಮ್ ಅವರ ಜಯಂತಿಯ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಜಗಜೀವನ ರಾಮ್
Jayanti


ನವದೆಹಲಿ, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಬಾಬು ಜಗಜೀವನ ರಾಮ್ ಅವರ ಜಯಂತಿಯ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಜಗಜೀವನ ರಾಮ್ ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರ ಸೇವೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟಿದ್ದರು ಎಂದು ಅಮಿತ್ ಶಾ ತಿಳಿಸಿದ್ದಾರೆ.

ಧಾರ್ಮಿಕ ಮತಾಂತರಗಳನ್ನು ವಿರೋಧಿಸಿ, ವಿಭಜಕ ಶಕ್ತಿಗಳನ್ನು ದೃಢವಾಗಿ ಎದುರಿಸುವ ಮೂಲಕ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಮಹತ್ವದ ಕೊಡುಗೆ ನೀಡಿದರು ಎಂದು ಪ್ರಶಂಸಿಸಿದ್ದಾರೆ.

ಸಮಾಜದ ದುರ್ಬಲ ಹಾಗೂ ಅಂಚಿನಲ್ಲಿರುವ ವರ್ಗಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟವು ಸದಾ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande