ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಮ್ಮನ್ನು ಗೌರವ ಡಾಕ್ಟರೇಟ್ಗ
Bommai


ಬೆಂಗಳೂರು, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ತಮ್ಮನ್ನು ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಆದರೆ, ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿರುವುದರಿಂದ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲವೆಂದು ಸ್ಪಷ್ಟಪಡಿಸಿದ ಬೊಮ್ಮಾಯಿ, “ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದವರಿಗೆ ನೀಡಬೇಕಾದ ಗೌರವವಾಗಿದ್ದು, ರಾಜಕಾರಣಿಗಳಿಗೆ ಅಥವಾ ಸಾಮಾನ್ಯ ಸಾಮಾಜಿಕ ಸೇವೆಯಲ್ಲಿ ತೊಡಗಿರುವವರಿಗೆ ನೀಡುವುದು ಸಮಂಜಸವಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯವೆಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್ ನೀಡುವ ಕುರಿತು ಪುನರ್ವಿಚಾರ ಮಾಡಬೇಕೆಂದು ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿರುವ ಅವರು, ಮತ್ತೊಮ್ಮೆ ಈ ಗೌರವವನ್ನು ಸ್ವೀಕರಿಸುವುದಿಲ್ಲವೆಂದು ಪುನರುಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande