
ಕೊಪ್ಪಳ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ಜೂನ್ 30 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ www.sahithyaacademy.karnataka.gov.in ಗೆ ಸಂಪರ್ಕಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್