



ಬಳ್ಳಾರಿ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದೇಶಕ್ಕೆ ಆಹಾರ ಭದ್ರತೆ ಒದಗಿಸುವಲ್ಲಿ ಮತ್ತು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಪಾತ್ರ ಅವಿಸ್ಮರಣೀಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನರಾಮ್ ಅವರು 119ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶವು ಇಂದು ಆಹಾರ ಭದ್ರತೆಯಲ್ಲಿ ಸ್ವಾವಲಂಬನೆ ಸಾಧಿಸಲು ಅಂದಿನ ದಿನಗಳಲ್ಲಿ ದೇಶದ ಧೀಮಂತ ನಾಯಕ, ಮಾಜಿ ಉಪಪ್ರಧಾನಿ ಹಾಗೂ ಭಾರತದ ಹಸಿರು ಕ್ರಾಂತಿಯ ಮೂಲ ಪುರುಷ ಡಾ.ಬಾಬು ಜಗಜೀವನರಾಮ್ ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ ಎಂದು ಸ್ಮರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಕೃಷಿ ಸಚಿವರಾಗಿ ಬಾಬೂಜಿಯವರು ತಂದ ಹೊಸ ತಂತ್ರಜ್ಞಾನ ಮತ್ತು ಹಸಿರು ಕ್ರಾಂತಿ ದೇಶಕ್ಕೆ ಆಹಾರ ಸ್ವಾವಲಂಬನೆಯನ್ನು ತಂದುಕೊಟ್ಟಿತು. ಅಂದಿನಿಂದ ಇಂದಿನವರೆಗೆ ದೇಶದಲ್ಲಿ ಆಹಾರ ಉತ್ಪಾದನೆಯ ಕೊರತೆಯಾಗಿಲ್ಲ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ದೇಶದ ಇಬ್ಬರು ಮಹಾನ್ ನಾಯಕರಾದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರನ್ನು ಭಾರತದ ಎರಡು ಕಣ್ಣುಗಳಿದ್ದಂತೆ ಎಂದರು.
ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿ ಡಾ.ಶ್ರೀನಿವಾಸಮೂರ್ತಿ ಎಂ. ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಸಂವಿಧಾನ ಪ್ರಸ್ತಾವನೆ ಬೋಧಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಡಾ.ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಪಂಪಾಪತಿ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಎಸ್.ನವೀನ್ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಸತಿ ನಿಲಯದ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜಯಂತಿಯ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಸಂಭ್ರಮದ ಮೆರವಣಿಗೆ:
ಡಾ.ಬಾಬು ಜಗಜೀವನ್ ರಾಮ್ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕøತಿಕ ಕಲಾ ತಂಡಗಳು ಭಾಗವಹಿಸಿ ಮೆರಗು ನೀಡಿದವು.
ಮೆರವಣಿಗೆಗೆ ಮುನ್ನ ನಗರದ ನಲ್ಲಚೇರುವು ಪ್ರದೇಶದ ಡಾ.ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.
ಆಕರ್ಷಕ ಸ್ತಬ್ಧಚಿತ್ರ:
ಮೆರವಣಿಗೆಯಲ್ಲಿ ಸಾರಿಗೆ ಇಲಾಖೆ ವತಿಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು.
ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೆಯ ಬ್ರೂಸ್ ಪೇಟೆ ಪೆÇೀಲಿಸ್ ಠಾಣೆ ಮುಂಭಾಗ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್