ರಾಜ್ಯದಾದ್ಯಂತ ಒಣಹವೆ,ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಳಗ್ಗಿನ ವೇಳೆಯಲ್ಲಿ ತಾಪಮಾನ ಹೆಚ್ಚಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡು ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸ
ರಾಜ್ಯದಾದ್ಯಂತ ಒಣಹವೆ,ಹಲವೆಡೆ ಮಳೆ ಮುನ್ಸೂಚನೆ


ಬೆಂಗಳೂರು, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಳಗ್ಗಿನ ವೇಳೆಯಲ್ಲಿ ತಾಪಮಾನ ಹೆಚ್ಚಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡು ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಶೇಷವಾಗಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಸ್ಥಳೀಯವಾಗಿ ಹವಾಮಾನ ಬದಲಾವಣೆ ಕಾಣಿಸಿಕೊಳ್ಳಲಿದೆ. ಅಲ್ಲಲ್ಲಿ ಗುಡುಗು-ಸಿಡಿಲಿನೊಂದಿಗೆ ಜೋರಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಗಾಳಿ ವೇಗ ಹೆಚ್ಚಾಗುವ ಹಿನ್ನೆಲೆಯಲ್ಲಿ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸುವಂತೆ ಹಾಗೂ ತೆರೆಯ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಸಹ ಹವಾಮಾನ ಮಾಹಿತಿ ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande