
ಕೊಪ್ಪಳ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2024-25ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆ ಹಂಗಾಮಿನ ಫಸಲ್ ಬೀಮಾ(ವಿಮಾ) ಯೋಜನೆಯಡಿಯಲ್ಲಿ ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ 2024-25 ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹೊಂದಾಣಿಕೆಯಾಗದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ರೈತರು ಆಕ್ಷೇಪಣೆ ಸಲ್ಲಿಸುಬಹುದಾಗಿದೆ.
ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಕೊಪ್ಪಳ ತಾಲ್ಲೂಕಿಗೆ ಸಂಬಂಧಿಸಿದಂತೆ ಮುಂಗಾರು 1,630, ಹಿಂಗಾರು 754 ಹಾಗೂ ಬೇಸಿಗೆಯ 8 ಪ್ರಸ್ತಾವನೆಗಳು ತಿರಸ್ಕøತಗೊಂಡಿದ್ದು, ವಿಮಾ ಅರ್ಜಿ ತಿರಸ್ಕøತಗೊಂಡ ಬಗ್ಗೆ ಸಂಬಂಧಪಟ್ಟ ರೈತರ ಆಕ್ಷೇಪಣೆ ಇದ್ದಲ್ಲಿ ಮಾತ್ರ ಮರುಪರಿಶೀಲಿಸಲು, ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 17 ರೊಳಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಕೊಪ್ಪಳ ಇಲ್ಲಿಗೆ ಮನವಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಮನವಿಯೊಂದಿಗೆ ಪಹಣಿ ಪತ್ರಿಕೆ (2024-25ರ ಪಹಣಿ ಪತ್ರಿಕೆಯಲ್ಲಿ (ಆರ್ಟಿಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಅದರ ರಶೀದಿ, ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ ರಶೀದಿಯ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್