ಐಪಿಎಲ್ ಪಂದ್ಯ ; ವ್ಯಾಪಕ ಭದ್ರತೆ, ಹೆಚ್ಚುವರಿ ಬಸ್ ಸಂಚಾರ
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
IPL


ಬೆಂಗಳೂರು, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಆರ್ಸಿಬಿ–ಸಿಎಸ್ಕೆ ನಡುವಿನ ಪಂದ್ಯಕ್ಕೆ ಅಪಾರ ಅಭಿಮಾನಿಗಳು ಸೇರುವ ನಿರೀಕ್ಷೆಯಿರುವುದರಿಂದ ಸುಮಾರು 2,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ನಿಗಾವಹಣೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೋಲಿಸ್ ಆಯುಕ್ತ ಸೀಮಂತಕುಮಾರ ಸಿಂಗ್ ತಿಳಿಸಿದ್ದಾರೆ.

ಕಳೆದ ಪಂದ್ಯದಲ್ಲಿ 70ಕ್ಕೂ ಹೆಚ್ಚು ಮೊಬೈಲ್ಗಳು ಕಳ್ಳತನವಾಗಿದ್ದ ಹಿನ್ನೆಲೆ ಈ ಬಾರಿ ಹೆಚ್ಚುವರಿ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅಭಿಮಾನಿಗಳು ತಮ್ಮ ಸಾಮಾನುಗಳನ್ನು ಸುರಕ್ಷಿತವಾಗಿ ಇಡಲು ಎರಡು ಬ್ಯಾಗೇಜ್ ಕೌಂಟರ್ಗಳನ್ನು ಸ್ಥಾಪಿಸಲಾಗಿದ್ದು, ಮೊಬೈಲ್ ಕಳ್ಳತನದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜನಸಂದಣಿ ನಿಯಂತ್ರಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ವಿಶೇಷ ಬಸ್ ಸೇವೆಗಳನ್ನು ಒದಗಿಸಲಾಗಿದೆ. ಪಾರ್ಕಿಂಗ್ ವ್ಯವಸ್ಥೆಯನ್ನು ಸುಧಾರಿಸಲಾಗಿದ್ದು, ಮೆಟ್ರೋ ಸೇವೆಯ ಅವಧಿಯನ್ನೂ ವಿಸ್ತರಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande