
ಬಾಗಲಕೋಟೆ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಆತಂಕ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದರು. ಹೆಣ್ಣು ಮಕ್ಕಳು ಕಾಲೇಜಿಗೆ ಅಥವಾ ಕೆಲಸಕ್ಕೆ ಹೋಗಿ ಮನೆಗೆ ತಡವಾಗಿ ಬಂದರೆ ಕುಟುಂಬದವರು ಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವ್ಯವಸ್ಥೆ ಬದಲಾಗಬೇಕಾದರೆ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಅಗತ್ಯ ಎಂದು ಅವರು ಹೇಳಿದರು.
ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಅವರು ನಗರದ ವಾರ್ಡ್ ಸಂಖ್ಯೆ 28 ಹಾಗೂ ವಾರ್ಡ್ ಸಂಖ್ಯೆ 29ರಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ತಾಯಂದಿರಲ್ಲಿ ಭಾರೀ ಆತಂಕವಿದೆ. ಬೆಳಿಗ್ಗೆ ಟಿವಿ ನೋಡಿದರೆ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದು ಕಾಣುತ್ತದೆ. ಡ್ರಗ್ಸ್ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವುದರಿಂದ ಸಾಮಾಜಿಕ ವ್ಯವಸ್ಥೆಯೇ ಹದಗೆಟ್ಟಿದೆ ಎಂದು ಆರೋಪಿಸಿದರು.
ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಹೆಣ್ಣುಮಕ್ಕಳ ಸುರಕ್ಷತೆಗೆ ಧಕ್ಕೆಯಾಗುತ್ತಿದೆ. ಈ ಪರಿಸ್ಥಿತಿ ಬದಲಾಗಬೇಕಾದರೆ ಸರ್ಕಾರ ಬದಲಾವಣೆ ಅಗತ್ಯ. ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಿದರೆ ಅದು ಸರ್ಕಾರದ ಪತನದ ಮೊದಲ ಹೆಜ್ಜೆಯಾಗಲಿದೆ ಎಂದು ಹೇಳಿದರು.
ಪ್ರತಿಷ್ಠೆಯ ಚುನಾವಣೆ
ಈ ಉಪಚುನಾವಣೆ ಅತ್ಯಂತ ಪ್ರತಿಷ್ಠೆಯಾಗಿದೆ. ಪ್ರಾಮಾಣಿಕತೆ ವಿಚಾರದಲ್ಲಿ ರಾಜ್ಯದಲ್ಲಿ ಬೆರಳೆಣಿಕೆಯಷ್ಟು ಜನರನ್ನೇ ಉದಾಹರಣೆಗೆ ಹೇಳಬಹುದು. ಅದರಲ್ಲಿ ವೀರಣ್ಣ ಚರಂತಿಮಠ ಪ್ರಮುಖರು ಎಂದು ಬೊಮ್ಮಾಯಿ ಹೇಳಿದರು.
ಬಸವೇಶ್ವರ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿ ನಿಸ್ವಾರ್ಥ ಸೇವೆ ಮಾಡಿದ ಅವರು ಬಾಗಲಕೋಟೆಯ ಅಭಿವೃದ್ಧಿಗೂ ಬದ್ಧರಾಗಿದ್ದಾರೆ ಎಂದು ಹೇಳಿದರು.
ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿ
ನಾನು ನೀರಾವರಿ ಸಚಿವರಾಗಿದ್ದಾಗ ಬಾಗಲಕೋಟೆ ಅಭಿವೃದ್ಧಿಗೆ 200 ಎಕರೆ ಜಮೀನು ನೀಡಿದ್ದೆ. ಸಿಎಂ ಆಗಿದ್ದಾಗಲೂ ನಗರ ಅಭಿವೃದ್ಧಿಗೆ ಸುಮಾರು 2300 ಕೋಟಿ ರೂ. ಅನುದಾನ ನೀಡಿದ್ದೇವೆ. ಮುಳುಗಡೆ ಪ್ರದೇಶದ ಜನರ ಸಂಕಷ್ಟವನ್ನು ಮನಗಂಡು ನಗರವನ್ನು ಅಭಿವೃದ್ಧಿಪಡಿಸಲು ಹಲವು ಯೋಜನೆಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.
ಭ್ರಷ್ಟ ಸರ್ಕಾರದ ಆರೋಪ
ಪ್ರಸ್ತುತ ರಾಜ್ಯ ಸರ್ಕಾರ ಅತ್ಯಂತ ಭ್ರಷ್ಟವಾಗಿದೆ. ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಪ್ರತಿಯೊಂದು ಕಾರ್ಯಕ್ಕೂ ದರ ನಿಗದಿಯಾಗಿದೆ. ರಿಜಿಸ್ಟ್ರೇಶನ್ ಕೆಲಸಗಳಿಗೂ ಮೇಲಿನಿಂದ ಅನುಮತಿ ಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ವಾರ್ಡ್ ಸದಸ್ಯರು, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದಸಂಸ ದ
ಹಿಂದೂಸ್ತಾನ್ ಸಮಾಚಾರ್ / jyothi deshpande