ಪ್ರಧಾನಿಯಿಂದ ದಾರಿತ ಪ್ಪಿಸುವ ಹೇಳಿಕೆ : ಜೈರಾಮ್ ರಮೇಶ್
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಸದಸ್ಯರ ಸಂಖ್ಯೆಯನ್ನು ಶೇಕಡಾ 50ರಷ್ಟು ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ಪ್ರಧಾನಿ ನರೇಂದ್ರ ಮೋದಿ ಜನರನ್ನು ದಾರಿತಪ್ಪಿಸುವ
Jairam Ramesh file photo


ನವದೆಹಲಿ, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಲೋಕ ಸಭೆಯ ಸದಸ್ಯರ ಸಂಖ್ಯೆಯನ್ನು ಶೇಕಡಾ 50ರಷ್ಟು ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ಪ್ರಧಾನಿ ನರೇಂದ್ರ ಮೋದಿ ಜನರನ್ನು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಜೈರಾಮ್ ರಮೇಶ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ , ಲೋಕ ಸಭೆಯ ಒಟ್ಟು ಸ್ಥಾನಗಳನ್ನು ಹೆಚ್ಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಹಾನಿಯಾಗುವುದಿಲ್ಲ ಎಂಬ ಪ್ರಧಾನಿಯವರ ವಾದ “ತಪ್ಪು ನಿರ್ಧಾರಕ್ಕೆ ದಾರಿ ಮಾಡುವಂತದ್ದು” ಎಂದು ತಿಳಿಸಿದ್ದಾರೆ. “ಪ್ರಧಾನಿಯವರು ಜನರನ್ನು ಮೋಸಗೊಳಿಸುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಕೇರಳ ರಾಜ್ಯಗಳ ನಡುವಿನ ಲೋಕಸಭೆ ಸ್ಥಾನಗಳ ವ್ಯತ್ಯಾಸ ಈಗ 60 ಇದ್ದು, ಪ್ರಸ್ತಾಪ ಜಾರಿಯಾದರೆ ಅದು 90ಕ್ಕೆ ಏರಬಹುದು ಎಂದು ಹೇಳಿದ್ದಾರೆ. ಇದೇ ರೀತಿ, ಉತ್ತರ ಪ್ರದೇಶ ಮತ್ತು ತಮಿಳುನಾಡಿನ ನಡುವಿನ ವ್ಯತ್ಯಾಸವು 41ರಿಂದ ಕನಿಷ್ಠ 61ಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

“ದೊಡ್ಡ ಜನಸಂಖ್ಯೆ ಹೊಂದಿರುವ ರಾಜ್ಯಗಳಿಗೆ ಇನ್ನಷ್ಟು ಪ್ರತಿನಿಧಿತ್ವ ಸಿಗುವುದರಿಂದ, ಸಣ್ಣ ಮತ್ತು ದಕ್ಷಿಣ ರಾಜ್ಯಗಳ ಪ್ರಭಾವ ಕಡಿಮೆಯಾಗುತ್ತದೆ. ಇದು ಕೇವಲ ದಕ್ಷಿಣ ಭಾರತಕ್ಕೆ ಮಾತ್ರವಲ್ಲ, ಪಂಜಾಬ್, ಹರಿಯಾಣ ಹಾಗೂ ಈಶಾನ್ಯ ರಾಜ್ಯಗಳಿಗೂ ಅನ್ಯಾಯವಾಗಲಿದೆ” ಎಂದು ಜೈರಾಮ್ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ದೇಶವು ಆರ್ಥಿಕ ಮತ್ತು ವಿದೇಶಾಂಗ ನೀತಿ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಇಂತಹ ಮಹತ್ವದ ವಿಷಯಗಳ ಕುರಿತು ಸಮಗ್ರ ಚರ್ಚೆ ಇಲ್ಲದೆ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಇದು ಜನರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾತ್ರ” ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande