
ಕೋಲಾರ, ೦೫ ಏಪ್ರಿಲ್ (ಹಿ.ಸ) :
ಆ್ಯಂಕರ್ : ಬಾಬು ಜಗಜೀವನ್ ರಾಮ್ ಜನ್ಮದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜನಪ್ರತಿನಿಧಗಳ ಗೈರು ಹಾಗೂ ಊಟದ ವ್ಯವಸ್ಥೆ ಕಲ್ಪಿಸಿಲ್ಲವೆಂದು ಸಮುದಾಯದ ಮುಖಂಡರು ವೇದಿಕೆ ಕಾರ್ಯಕ್ರಮದ ಬಳಿ ಧರಣಿ ನಡೆಸಿದರು.
ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ ೧೧೯ ನೇ ಜಯಂತ್ಯುತ್ಸವದ ಕಾರ್ಯಕ್ರಮವನ್ನು ಕೋಲಾರ ಜಿಲ್ಲಾಡಳಿತದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿತ್ತು ಬೆಳ್ಳಿಗೆ ೧೦ ಗಂಟೆಯಲ್ಲಿ ಪಲ್ಲಕಿಗಳಗೆ ಚಾಲನೆ ನೀಡಲಾಗಿದ್ದು ನಗರದಾದ್ಯಂತ ಮೆರವಣಿಗೆ ನಡೆಸಿ ಟಿ ಚೆನ್ನಯ್ಯ ರಂಗಮAದಿರಕ್ಕೆ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ ಮುಖಂಡರಿಗೆ ನಚಿಕೇತನ ನಿಲಯದಲ್ಲಿ ಮದ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಸರಿಯಾದ ಊಟ ಹಾಗೂ ನೀರಿನ ವ್ಯವಸ್ಥೆ ಮಾಡಿಲ್ಲ ಹಾಗೂ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಾಗಲಿ ಉಸ್ತುವಾರಿ ಸಚಿವರಾಗಲಿ ಯಾವುದೇ ಜನಪ್ರತಿನಿಧಿಗಳು ಹಾಜರಾಗದೆ ಬಾಬು ಜಗಜೀವನ್ ರಾಮ್ ಹಾಗೂ ಸಮುದಾಯಕ್ಕೆ ಮನ್ನಣೆ ನೀಡುತ್ತಿಲ್ಲವೆಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಸಮುದಾಯದ ಮುಖಂಡರು ರಂಗಮ0ದಿರದಲ್ಲಿ ಸಭಾ ಕಾರ್ಯಕ್ರಮವನ್ನು ತಡೆದು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಆಗಮಿಸಬೇಕೆಂದು ಪ್ರತಿಭಟನಕರಾರು ಪಟ್ಟು ಇಡಿದ ಹಿನ್ನಲೆ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಮಂಗಳ ಭೇಟಿ ನೀಡಿ ಪ್ರತಿಭಟನಾ ಕರಾರನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕ್ರಮದಲ್ಲಿ ನಡೆದಿರುವ ಲೋಪದೋಷಗಳ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆ ನಂತರ ಪ್ರತಿಭಟನೆಯನ್ನು ವಾಪ್ಸು ಪಡೆಯಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್