
ಅಮೃತಸರ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬಿನ ಅಮೃತಸರ ಕಮಿಷನರೇಟ್ ಪೊಲೀಸರು ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿ, 4.13 ಕೆಜಿ ಹೆರಾಯಿನ್ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಪಂಜಾಬ್ ಡಿಜಿಪಿ, ಬಂಧಿತರು ಯುರೋಪ್ ಮೂಲದ ಹ್ಯಾಂಡ್ಲರ್ಗಳು ಹಾಗೂ ಜೈಲಿನಲ್ಲಿರುವ ಸಹಚರರೊಂದಿಗೆ ನೇರ ಸಂಪರ್ಕ ಹೊಂದಿದ್ದು, ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದರು. ಅಲ್ಲದೆ, ಮಜ್ಹಾ ಮತ್ತು ದೋಬಾ ಪ್ರದೇಶಗಳಲ್ಲಿ ಈ ಮಾದಕವಸ್ತುಗಳನ್ನು ವಿತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಹೇಳಿದ್ದಾರೆ.
ಇಬ್ಬರೂ ಆರೋಪಿಗಳು ಈ ಹಿಂದೆ ಎನ್ ಡಿಪಿಎಸ್ ಕಾಯ್ದೆ
ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಸುಲ್ತಾನ್ವಿಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಸಂಪೂರ್ಣ ಮಾದಕವಸ್ತು ಜಾಲವನ್ನು ಬಯಲುಗೊಳಿಸಲು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa