
ಕೊಪ್ಪಳ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2026-27 ನೇ ಸಾಲಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಏಪ್ರಿಲ್ 12 ರಂದು ನಡೆಯಲಿರುವ ಪ್ರವೇಶ ಪರೀಕ್ಷೆಗೆ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಲಾಗಿದೆ.
ಪ್ರವೇಶ ಪರೀಕ್ಷೆಯು ಏ.12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in ಭೇಟಿನೀಡಿ ಪ್ರವೇಶ ಪತ್ರವನ್ನು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಕೂಡ ಪ್ರವೇಶ ಪತ್ರದ ಲಿಂಕ್ ಅನ್ನು ವೈಯಕ್ತಿಕವಾಗಿ ಕಳಿಸಲಾಗಿದ್ದು, ಅಲ್ಲಿಯೂ ಸಹ ಪ್ರವೇಶ ಪತ್ರ ಪಡೆದು ನಿಗದಿತ ದಿನಾಂಕದಂದು ಪ್ರವೇಶ ಪರೀಕ್ಷೆಗೆ ಹಾಜರಾಗಲು ಈ ಮೂಲಕ ತಿಳಿಸಿದೆ.
ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ತೊಂದರೆಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ವಸತಿ ಶಾಲೆ, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ 08539-225070, 8088892549, ಗಂಗಾವತಿ - 08533, 9972524670, ಕುಷ್ಟಗಿ 08536-267045, 8861610578, ಯಲಬುರ್ಗಾ- 8095191406 ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಛೇರಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್