ತೇಜಸ್ವಿ ಪುಣ್ಯಸ್ಮರಣೆ : ಸಿದ್ದರಾಮಯ್ಯ ಭಾವಪೂರ್ಣ ನಮನ
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖ್ಯಾತ ಕನ್ನಡ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ತಮ್ಮ ವೈಶಿಷ್ಟ್ಯಪೂರ್ಣ ಬರಹಗಳ ಮೂಲಕ ಒಂದಿ
Cm


ಬೆಂಗಳೂರು, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖ್ಯಾತ ಕನ್ನಡ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ತಮ್ಮ ವೈಶಿಷ್ಟ್ಯಪೂರ್ಣ ಬರಹಗಳ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ತೇಜಸ್ವಿಯವರು, ಇಂದಿಗೂ ತಮ್ಮ ಕೃತಿಗಳು ಮತ್ತು ಚಿಂತನೆಗಳ ಮೂಲಕ ಸಮಾಜದ ಮೇಲೆ ಪ್ರಭಾವ ಬೀರುತ್ತಲೇ ಇದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಭಾಷೆಯ ಮೇಲಿನ ಅಪಾರ ಪ್ರೀತಿ, ಪರಿಸರದ ಬಗ್ಗೆ ಕಾಳಜಿ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಗತಿಪರ ಚಿಂತನೆಗಳಂತಹ ಅಪರೂಪದ ಗುಣಗಳಿಂದ ತೇಜಸ್ವಿಯವರು ಸದಾ ಜನಮನಗಳಲ್ಲಿ ಜೀವಂತವಾಗಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಬಹುಮುಖಿ ವ್ಯಕ್ತಿತ್ವ ಹೊಂದಿದ್ದ ಪೂರ್ಣಚಂದ್ರ ತೇಜಸ್ವಿಯವರನ್ನು ಅವರ ಪುಣ್ಯಸ್ಮರಣೆಯ ದಿನದಂದು ಅಭಿಮಾನಪೂರ್ವಕವಾಗಿ ಸ್ಮರಿಸಿ, ಗೌರವ ನಮನ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande