ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ ಏಪ್ರಿಲ್ 10ರಂದು ಸಮಾವೇಶ
ಬಳ್ಳಾರಿ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಏಪ್ರಿಲ್ 10ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ರಾಜ್ಯ ಮಟ್ಟದ ಬೃಹತ್ ಜನ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸಲಹೆಗಾರರಾದ ಆರ್. ಸೋಮಶೇಖರಗೌಡ ಅವರು ತಿಳಿಸಿದ್ದಾರೆ.
ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ ಏಪ್ರಿಲ್ 10ರಂದು ಜನಸಮಾವೇಶ


ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ ಏಪ್ರಿಲ್ 10ರಂದು ಜನಸಮಾವೇಶ


ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ ಏಪ್ರಿಲ್ 10ರಂದು ಜನಸಮಾವೇಶ


ಬಳ್ಳಾರಿ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಏಪ್ರಿಲ್ 10ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ರಾಜ್ಯ ಮಟ್ಟದ ಬೃಹತ್ ಜನ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸಲಹೆಗಾರರಾದ ಆರ್. ಸೋಮಶೇಖರಗೌಡ ಅವರು ತಿಳಿಸಿದ್ದಾರೆ.

ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಬಳ್ಳಾರಿ ಜಿಲ್ಲಾ ಸಮಿತಿಗಳು ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಮುಚ್ಚುತ್ತಿರುವ 40 ಸಾವಿರ ಸರ್ಕಾರಿ ಶಾಲೆಗಳನ್ನು ಉಳಿಸಲು ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಹಿಳೆಯರು, ಯುವಕರು, ರೈತರು ಹಾಗೂ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ ಕಳೆದ 4 ತಿಂಗಳಿನಿಂದ ಜನ ಹೋರಾಟ ನಡೆದಿದೆ. ಬಳ್ಳಾರಿ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ಬಡ ಮತ್ತು ಮಧ್ಯಮವರ್ಗದವರ ಮೇಲೆ ಪ್ರಹಾರ ನಡೆಸುತ್ತಿದೆ ಎಂದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಯಾವ-ಯಾವ ಶಾಲೆಗಳನ್ನು ವಿಲೀನಗೊಳಿಸಬೇಕೆಂದು ಮ್ಯಾಪಿಂಗ್ ಮಾಡಲಾಗಿದೆ. ಏಪ್ರಿಲ್ 9 ಮತ್ತು 10ರಂದು ಪೋಷಕರ ಸಭೆಗಳು ನಡೆಯಲಿವೆ. ಈ ಯೋಜನೆಯನ್ನು ಅನುμÁ್ಠನಗೊಳಿಸಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಜನ ಸಮಾವೇಶವನ್ನು ಏಪ್ರಿಲ್ 10, 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಲಾಗುತ್ತದೆ ಎಂದರು.

ಹಿರಿಯ ಸಾಹಿತಿಗಳಾದ ಡಾ. ಹಂಪ ನಾಗರಾಜಯ್ಯ, ಡಾ. ಕೆ. ಮರುಳಸಿದ್ದಪ್ಪ, ಪ್ರೊ ಎಸ್.ಜಿ. ಸಿದ್ದರಾಮಯ್ಯ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ. ಅಲ್ಲಮಪ್ರಭು ಬೆಟ್ಟದೂರು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಎ. ಮುರಿಗೆಪ್ಪ, ಹಿರಿಯ ಹೋರಾಟಗಾರರಾದ ರಾಘವೇಂದ್ರ ಕುಷ್ಟಗಿ, ಹಿರಿಯ ನ್ಯಾಯವಾದಿಗಳಾದ ಶ್ರೀಮತಿ ಹೇಮಲತಾ ಮಹಿಷಿ, ಶಿಕ್ಷಣ ತಜ್ಞರಾದ ನಿರಂಜನರಾಧ್ಯ ವಿ.ಪಿ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬಿಹಾ ಭೂಮಿಗೌಡ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಸಾಮಾಜಿಕ ಹೋರಾಟಗಾರರಾದ ಉಗ್ರ ನರಸಿಂಹೇಗೌಡ, ಎಐಡಿಎಸ್ಓ ರಾಜ್ಯ ಕಾರ್ಯದರ್ಶಿಗಳಾದ ಅಜಯ್ ಕಾಮತ್, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ವಿ.ಎನ್. ರಾಜಶೇಖರ್, ಎಐಕೆಕೆಎಂಎಸ್ ರೈತ ಸಂಘಟನೆಯ ರಾಜ್ಯಾಧ್ಯಕ್ಷರಾದ ಶಶಿಧರ್ ಎಂ, ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಸೋಮಶೇಖರ.ಕೆ, ಎಐಎಂಎಸ್ಎಸ್ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಶೋಭಾ ಎಸ್, ಎಐಡಿವೈಓ ಯುವಜನ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಸಿದ್ಧಲಿಂಗ ಬಾಗೇವಾಡಿ ಹಾಗೂ ಎಐಡಿಎಸ್ಓ ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ.ಎಸ್. ಸೇರಿ ಅನೇಕ ಸಾಹಿತಿಗಳು ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧದ ಈ ಜನಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷರಾದ ಶಾಂತ, ಸೌಮ್ಯ, ಮಾನಯ್ಯ ಮಲ್ಲಿಕಾರ್ಜುನ, ಸದಸ್ಯರಾದ ಶಾಂತಿ ಮತ್ತು ಮಲ್ಲಿಕಾರ್ಜುನ್ ಅವರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande