ಬಿಜೆಪಿ ಸಂಸ್ಥಾಪನಾ ದಿನ ; ಪ್ರಧಾನಿ ಮೋದಿ ಸೇರಿ ಗಣ್ಯ ನಾಯಕರ ಶುಭಾಶಯ
ನವದೆಹಲಿ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಸಂಸ್ಥಾಪನಾ ದಿನದ ಅಂಗವಾಗಿ ದೇಶಾದ್ಯಂತದ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಸೇರಿದಂತೆ ಹಲವು ಪ್ರಮುಖ ನಾಯಕರು ಶುಭಾಶಯ ಕೋರಿದ್ದಾರೆ. ಸಾಮ
Foundation day


ನವದೆಹಲಿ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಸಂಸ್ಥಾಪನಾ ದಿನದ ಅಂಗವಾಗಿ ದೇಶಾದ್ಯಂತದ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಸೇರಿದಂತೆ ಹಲವು ಪ್ರಮುಖ ನಾಯಕರು ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಬಿಜೆಪಿಯ ಸಂಸ್ಥಾಪನಾ ದಿನದಂದು ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ‘ಭಾರತ ಮೊದಲು’ ಎಂಬ ತತ್ವದಿಂದ ಪ್ರೇರಿತವಾಗಿ ಪಕ್ಷವು ಸದಾ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ನಮ್ಮ ಬದ್ಧತೆ ಮುಂದುವರಿಯಲಿ” ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಿಜೆಪಿ ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಿದ್ದು, ತುಷ್ಟೀಕರಣದ ರಾಜಕೀಯದಿಂದ ದೇಶವನ್ನು ಮುಕ್ತಗೊಳಿಸಿ ಪಾರದರ್ಶಕ ಆಡಳಿತಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ. “ಇಂದು ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ, 1.4 ಶತಕೋಟಿ ಜನರ ಆಶಯಗಳ ಪ್ರತಿನಿಧಿಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಅವರು, ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪಕ್ಷವನ್ನು ಬೆಳೆಸಿದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ತ್ಯಾಗವನ್ನು ಸ್ಮರಿಸಿದರು. ಜನಸಂಘದ ಕಾಲದಿಂದಲೂ ಆರಂಭವಾದ ಈ ಪ್ರಯಾಣವು ಅಸಂಖ್ಯಾತ ಕಾರ್ಯಕರ್ತರ ಪರಿಶ್ರಮದ ಫಲವಾಗಿದೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಗಿರಿರಾಜ್ ಸಿಂಗ್ ಸೇರಿದಂತೆ ಹಲವಾರು ನಾಯಕರು ಪಕ್ಷದ ಬೆಳವಣಿಗೆಯಲ್ಲಿ ಕೊಡುಗೆ ನೀಡಿದ ಹಿರಿಯರನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande