
ಗದಗ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಗದಗ ವಿಧಾನ ಸಭಾ ಕ್ಷೇತ್ರದ ಹುಲಕೋಟಿ ಗ್ರಾಮದಲ್ಲಿ ಪಕ್ಷದ 46ನೇ ಸಂಸ್ಥಾಪನಾ ದಿನವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗ್ರಾಮದ ಮುಖಂಡರಾದ ವೆಂಕಟೇಶ ಸೂರಣಗಿ ಅವರ ನಿವಾಸದ ಮೇಲ್ಛಾವಣಿಯಲ್ಲಿ ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ಬೂದಪ್ಪ ಹಳ್ಳಿ ಮಾತನಾಡಿ, “ಸಂಕಲ್ಪ, ಸೇವೆ ಮತ್ತು ಸಮರ್ಪಣೆಯ ತತ್ವದೊಂದಿಗೆ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಇದಕ್ಕೆ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ, ಹಿರಿಯರ ಮಾರ್ಗದರ್ಶನ ಹಾಗೂ ಜನರ ವಿಶ್ವಾಸವೇ ಮೂಲ ಕಾರಣ,” ಎಂದು ಹೇಳಿದರು.
ಸ್ಥಾಪನಾ ದಿನದ ಈ ಸಂದರ್ಭದಲ್ಲಿ ಸಂಘಟನೆಯ ಬಲವರ್ಧನೆಗಾಗಿ ಎಲ್ಲ ಕಾರ್ಯಕರ್ತರೂ ನಿಷ್ಠೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಹಿರಿಯ ಮುಖಂಡ ಎಂ.ಎಸ್. ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಅಶೋಕ ಸಂಕಣ್ಣವರ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಗ್ರಾಮದ ಹಲವಾರು ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP